ಕ್ರೀಡೆ

ಟೆಸ್ಟ್ ರ್ಯಾಂಕಿಂಗ್: ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿಗೆ ಬಡ್ತಿ

ಮೊದಲ ಟೆಸ್ಟ್ ಪಂದ್ಯದಲ್ಲಿ ಅವಳಿ ಶತಕ...

ಟೆಸ್ಟ್ ರ್ಯಾಂಕಿಂಗ್: ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿಗೆ ಬಡ್ತಿ
ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ
Published On :

ದುಬೈ: ಮೊದಲ ಟೆಸ್ಟ್ ಪಂದ್ಯದಲ್ಲಿ ಅವಳಿ ಶತಕ ಬಾರಿಸಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಬಡ್ತಿ ಪಡೆದಿದ್ದಾರೆ.

ಹೋರಾಟಕಾರಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಬರೋಬ್ಬರಿ 11 ಸ್ಥಾನಗಳ ಏರಿಕೆ ಕಂಡಿದ್ದು, 16ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಭಾರತದ ಪರ ಶ್ರೇಷ್ಠ ಸ್ಥಾನ ಪಡೆದ ಆಟಗಾರನಾಗಿದ್ದಾರೆ. ಇನ್ನು ಭಾರತದ ಮತ್ತೊಬ್ಬ ಬ್ಯಾಟ್ಸ್‌ಮನ್ ಮುರಳಿ ವಿಜಯ್ ಸಹ 8 ಸ್ಥಾನಗಳ ಏರಿಕೆ ಕಂಡಿದ್ದು, 28ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ಚೇತೇಶ್ವರ ಪೂಜಾರ 18 ಹಾಗೂ ಧೋನಿ 31ನೇ ಸ್ಥಾನದಲ್ಲಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡದ ಡೇವಿಡ್ ವಾರ್ನರ್ ನಾಲ್ಕನೇ ಸ್ಥಾನ ಪಡೆಯುವ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇನ್ನು ಸ್ಟೀವನ್ ಸ್ಮಿತ್ ಸಹ ವೃತ್ತಿ ಜೀವನದಲ್ಲಿ ಗರಿಷ್ಠ ಸ್ಥಾನ ಪಡೆದಿದ್ದು, 8ನೇ ಸ್ಥಾನ ಪಡೆದಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ನೆಥನ್ ಲಿಯೊನ್, 19ನೇ ಸ್ಥಾನ ಪಡೆದಿದ್ದಾರೆ. ಅಗ್ರ ಎರಡು ಸ್ಥಾನದಲ್ಲಿ ಕ್ರಮವಾಗಿ ದಕ್ಷಿಣ ಆಫ್ರಿಕಾದ ಡೇಲ್ ಸ್ಪೇಯ್ನ್ ಹಾಗೂ ಶ್ರೀಲಂಕಾದ ರಂಗದ ಹೆರಾಥ್ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾದ ಮಿಚೆಲ್ ಜಾನ್ಸ್‌ನ್ ಹಾಗೂ ರೆಯಾನ್ ಹ್ಯಾರಿಸ್ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದಿದ್ದಾರೆ. ಇನ್ನು ಭಾರತದ ಪರ ಆರ್. ಅಶ್ವಿನ್ ಹಾಗೂ ಪ್ರಗ್ಯಾನ್ ಓಜಾ ಕ್ರಮವಾಗಿ 13 ಮತ್ತು 14ನೇ ಸ್ಥಾನ ಪಡೆದಿರುವುದು ಗರಿಷ್ಠ ಸಾಧನೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.