ವಿಶ್ವಕಪ್ ಪಂದ್ಯಾವಳಿ ಬಳಿಕ ಏಕದಿನಕ್ಕೆ ಅಫ್ರಿದಿ ವಿದಾಯ
ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಬಳಿಕ ಪಾಕಿಸ್ತಾನದ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನಿವೃತ್ತಿಯಾಗಲಿದ್ದಾರೆ.

ಕರಾಚಿ: ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಬಳಿಕ ಪಾಕಿಸ್ತಾನದ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನಿವೃತ್ತಿಯಾಗಲಿದ್ದಾರೆ.
ಈ ವಿಷಯವನ್ನು ಸ್ವತಃ ಅಫ್ರಿದಿ ಭಾನುವಾರ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿ ಆತಿಥ್ಯದಲ್ಲಿ 2015ರ ಫೆಬ್ರವರಿಯಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದೆ. ಈ ಪ್ರತಿಷ್ಠಿತ ಟೂರ್ನಿಯ ನಂತರ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದೇನೆ. ಆದರೆ ಟಿ-20ಯಲ್ಲಿ ಮುಂದುವರೆಯಲಿದ್ದೇನೆ ಎಂದು ಅಫ್ರಿದಿ ಹೇಳಿದ್ದಾರೆ. ಟಿ-20ಯಲ್ಲಿ ಅಫ್ರಿದಿ ತಂಡದ ನಾಯಕರಾಗಿದ್ದಾರೆ.
ನೈರೋಬಿಯಲ್ಲಿ ಕೀನ್ಯಾ ವಿರುದ್ಧ 1996ರಲ್ಲಿ ಅಕ್ಟೋಬರ್ 2ರಂದು ನಡೆದ ಪಂದ್ಯದೊಂದಿಗೆ ಅಫ್ರಿದಿ ಏಕದಿನ ಅಂತಾರಾಷ್ಟ್ರೀಯ ಟೂರ್ನಿಗೆ ಪಾದಾರ್ಪಣೆ ಮಾಡಿದ್ದರು. ಏಕದಿನ ಪ್ರವೇಶ ಮಾಡಿದ ಮೂರು ದಿನಗಳಲ್ಲೇ ಅವರು ವಿಶ್ವದಾಖಲೆ ಸಾಧನೆ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಅ.4ರಂದು ನೈರೋಬಿಯಲ್ಲೇ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ವೇಗದ ವಿಶ್ವ ದಾಖಲೆಯ ಶತಕ ಸಾಧನೆ ಮಾಡಿದ್ದರು. ಈ ಪಂದ್ಯದಲ್ಲಿ ಅವರು ಕೇವಲ 37 ಎಸೆತಗಳಲ್ಲಿ ಶತಕ ಪೂರೈಸಿದ್ದರು.
17 ವರ್ಷಗಳ ತನಕ ಈ ದಾಖಲೆಯನ್ನು ಯಾರಿಗೂ ಮುರಿಯಲು ಸಾಧ್ಯವಾಗಿರಲಿಲ್ಲ. ನ್ಯೂಜಿಲೆಂಡ್‌ನ ಕೋರೆ ಅ್ಯಂಡರ್‌ಸನ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಕೇವಲ 36 ಎಸೆತಗಳಲ್ಲಿ ಶತಕ ಗಳಿಸಿ ಅಫ್ರಿದಿಯ ವಿಶ್ವದಾಖಲೆಯನ್ನು ಬದಿಗೊತ್ತಿದರು. ಒಟ್ಟು 389 ಏಕದಿನ ಪಂದ್ಯಗಳನ್ನಾಡಿರುವ ಪಾಕಿಸ್ತಾನದ ಆಲ್‌ರೌಂಡರ್ 23.49ರ ಸರಾಸರಿಯಲ್ಲಿ 7870 ರನ್‌ಗಳಿಸಿದ್ದಾರೆ. ಅಲ್ಲದೆ 391 ವಿಕೆಟ್‌ಗಳನ್ನೂ ಸಹ ಉರುಳಿಸಿದ್ದು, ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಆರನೇ ಬೌಲರ್ ಅವರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


