ಬಾಕ್ಸಿಂಗ್ ಡೇ ಟೆಸ್ಟ್: ಟೆಸ್ಟ್ ಕ್ರಿಕೆಟ್‌ಗೆ ಕರ್ನಾಟಕದ ರಾಹುಲ್ ಪಾದಾರ್ಪಣೆ
ಕರ್ನಾಟಕದ ಯುವ ಬ್ಯಾಟ್ಸ್‌ಮೆನ್ ಮಂಗಳೂರು ಮೂಲದ ಕೆ. ಎಲ್ ರಾಹುಲ್ ಅವರು ಇಂದು ಮೆಲ್ಬರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ...

ಮೆಲ್ಬರ್ನ್: ಕರ್ನಾಟಕದ ಯುವ ಬ್ಯಾಟ್ಸ್‌ಮೆನ್ ಮಂಗಳೂರು ಮೂಲದ ಕೆ. ಎಲ್ ರಾಹುಲ್ ಅವರು ಇಂದು ಮೆಲ್ಬರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.
22ರ ಹರೆಯದ ರಾಹುಲ್ ಬಲಗೈ ದಾಂಡಿಗನಾಗಿದ್ದು, ಭಾರತದ 284ನೇ ಟೆಸ್ಟ್ ಆಟಗಾರರಾಗಿದ್ದಾರೆ. ಶುಕ್ರವಾರ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ.
ಪಂದ್ಯ ಆರಂಭಕ್ಕೆ ಮುನ್ನ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ರಾಹುಲ್ ಅವರಿಗೆ ಟೆಸ್ಟ್ ಕ್ಯಾಪ್ ತೊಡಿಸುವ ಮೂಲಕ ಶುಭ ಕೋರಿದರು. ತಂಡದಲ್ಲಿ ರೋಹಿತ್ ಶರ್ಮಾ ಅವರ ಬದಲಿಗೆ ರಾಹುಲ್‌ಗೆ ಸ್ಥಾನ ನೀಡಲಾಗಿದೆ. 11 ನೇ ವಯಸ್ಸಿನಲ್ಲಿ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟ ರಾಹುಲ್, ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2013-14 ರಣಜಿ ಟ್ರೋಫಿಯಲ್ಲಿ 1,158 ರನ್‌ಗಳನ್ನು ಕಲೆ ಹಾಕಿದ್ದ ರಾಹುಲ್, ಕರ್ನಾಟಕದ ಗೆಲುವಿನ ರೂವಾರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


