ಸುನಿಲ್ ಛೆಟ್ರಿಗೆ ವರ್ಷದ ಪುಟ್ಬಾಲರ್ ಪ್ರಶಸ್ತಿ

ನವದೆಹಲಿ: ಭಾರತ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ ಅವರು ಎಐಎಫ್‌ಎಫ್‌ನ 2014ರ ವರ್ಷದ ಫುಟ್ಬಾಲ್ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಐ-ಲೀಗ್ ತಂಡಗಳು ಕೋಚ್‌ಗಳ ಮತದಾನದ ಮೂಲಕ ಈ ಪ್ರಶಸ್ತಿಗೆ ಸುನೀಲ್ ಛೆಟ್ರಿ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಸುನೀಲ್ ಛೆಟ್ರಿ ಸತತ ನಾಲ್ಕನೇ ಬಾರಿಗೆ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.
ಇನ್ನು ಭಾರತದ ಯುವ ಆಟಗಾರ ಸಂದೇಶ್ ಝಿಂಗನ್ ಅವರನ್ನು 2014ರ ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇನ್ನು ಬಾಲಾದೇವಿ ಅವರನ್ನು 2014ರ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


