ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಧೋನಿ ವಿದಾಯ
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಹೇಳಿದ್ದಾರೆ.

ಮೆರ್ಲ್ಬನ್: ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಹೇಳಿದ್ದಾರೆ.
ಆಸ್ಟ್ರೇಲಿಯದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದು, ಬಳಿಕ ಧೋನಿ ವಿದಾಯ ಘೋಷಿಸಿದ್ದಾರೆ.
ಆಸೀಸ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ನಾಯಕನಾಗಿ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ.
2005ರಲ್ಲಿ ಟೆಸ್ಟ್ ಕ್ರಿಕೆಟ್ ಬದುಕಿಗೆ ಪಾರ್ದಾಪಣೆ ಮಾಡಿದ ಧೋನಿ ಸುಮಾರು 90 ಪಂದ್ಯಗಳ ಪೈಕಿ 144 ಇನಿಂಗ್ಸ್‌ನಲ್ಲಿ 4,876 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 6 ಶತಕ ಹಾಗೂ 33 ಅರ್ಧ ಶತಕಗಳು ಒಳಗೊಂಡಿವೆ.
60 ಟೆಸ್ಟ್ ಪಂದ್ಯಗಳಿಗೆ ಧೋನಿ ನಾಯಕತ್ವ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ 27 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. ಇಳಿದಂತೆ 18 ಪಂದ್ಯಗಳಲ್ಲಿ ಸೋಲು ಹಾಗೂ 15 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


