ಕ್ರೀಡೆ

ಈ ತಂಡಕ್ಕೆ 12 ತಿಂಗಳ ಅವಕಾಶ ನೀಡಿ: ರವಿಶಾಸ್ತ್ರಿ

ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಸೋತಿದ್ದರೂ...

ಈ ತಂಡಕ್ಕೆ 12 ತಿಂಗಳ ಅವಕಾಶ ನೀಡಿ: ರವಿಶಾಸ್ತ್ರಿ
ರವಿಶಾಸ್ತ್ರಿ
Published On :

ಮೆಲ್ಬರ್ನ್: ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಸೋತಿದ್ದರೂ, ಹೆಚ್ಚು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಂಡದ ಮ್ಯಾನೇಜರ್ ರವಿಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ.

ಭಾರತ ಸರಣಿಯಲ್ಲಿ 0-3 ಅಥವಾ 0-4 ಅಂತರದಲ್ಲಿ ಸೋಲನುಭವಿಸಿದರೂ ಚಿಂತಿಸುವುದಿಲ್ಲ. ಏಕೆಂದರೆ, ಭಾರತ ತಂಡ ಆಕ್ರಮಣಕಾರಿ ಮನೋಭಾವದ ಮೂಲಕ ಎದುರಾಳಿ ತಂಡಕ್ಕೆ ಪ್ರತಿರೋಧ ನೀಡುತ್ತಿದೆ.

ಆಟಗಾರರು ಉತ್ತಮ ಮನೋಭಾವದಿಂದ ಕಣದಲ್ಲಿ ಉತ್ತಮ ಪ್ರದರ್ಶನ ನೀಡುವ ಬಗ್ಗೆ ಮಾತ್ರ ಗಮನಹರಿಸುತ್ತಿದ್ದೇನೆ ಎಂದರು. ಈಗಿರುವ ತಂಡ ಹೆಚ್ಚು ಯುವ ಆಟಗಾರರಿಂದ ಕೂಡಿದೆ. ಅವರಿಗೆ ಅನುಭವದ ಅಗತ್ಯವಿದೆ. ಅದು ಉತ್ತಮ ಪ್ರದರ್ಶನ ನೀಡುವಂತಾಗಲು ಸ್ವಲ್ಪ ಸಮಯಾವಕಾಶದ ಅಗತ್ಯವಿದೆ. ಹಾಗಾಗಿ ಈ ತಂಡಕ್ಕೆ ಮುಂದಿನ 12 ತಿಂಗಳು ಕಾಲವಕಾಶ ನೀಡಿದರೆ, ಉತ್ತಮವಾಗಿ ರೂಪುಗೊಳ್ಳಲಿದೆ. ನನ್ನ ಮಾತನ್ನು ಬರೆದಿಟ್ಟುಕೊಳ್ಳಿ ಎಂದು ರವಿಶಾಸ್ತ್ರಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.