ಕ್ರೀಡೆ

ಆಸ್ಟ್ರೇಲಿಯಾ ಪ್ರವಾಸ ವಿಶ್ವಕಪ್ ಸಿದ್ಧತೆಗೆ ಪೂರಕ: ಧೋನಿ

ವಿಶ್ವಕಪ್ ಬಗ್ಗೆ ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿರುವ ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ...

ಆಸ್ಟ್ರೇಲಿಯಾ ಪ್ರವಾಸ ವಿಶ್ವಕಪ್ ಸಿದ್ಧತೆಗೆ ಪೂರಕ: ಧೋನಿ
ಮಹೇಂದ್ರ ಸಿಂಗ್ ಧೋನಿ
Published On :

ದುಬೈ: ವಿಶ್ವಕಪ್ ಬಗ್ಗೆ ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿರುವ ಟೀಂ ಇಂಡಿಯಾದ ನಾಯಕ  ಮಹೇಂದ್ರ ಸಿಂಗ್ ಧೋನಿ, ಮುಂಬರುವ ಆಸ್ಟ್ರೇಲಿಯಾ ಪ್ರವಾಸ ವಿಶ್ವಕಪ್ ಸಿದ್ಧತೆಗೆ ಪೂರಕವಾಗಲಿದೆ ಎಂದು ಹೇಳಿದ್ದಾರೆ.

ಫೆಬ್ರವರಿ 15 ರಂದು ಅಡಿಲೇಡ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದ್ದು, ಅದಕ್ಕಾಗಿ ಹೆಚ್ಚಿನ ಸಿದ್ಧತೆ ನಡೆಸಿದ್ದೇವೆ.

2011ರ ವಿಶ್ವಕಪ್ ವಿಜೇತರಾದ ನಂತರ ಭಾರತ ಐಸಿಸಿ ಚಾಂಪಿಯನ್‌ಶಿಪ್ ಟ್ರೋಫಿಯನ್ನೂ ಗೆದ್ದುಕೊಂಡಿತ್ತು. ಇದು ಟೀಂನ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಧೋನಿ ಅಭಿಪ್ರಾಯಪಟ್ಟಿದ್ದಾರೆ.

ಏತನ್ಮಧ್ಯೆ, ಆಸ್ಟ್ರೇಲಿಯಾ ಪ್ರವಾಸದಿಂದಾಗಿ ವಿಶ್ವಕಪ್ ಸಿದ್ಧತೆ ನಡೆಸಲು ಉತ್ತಮ ಅವಕಾಶ ಲಭಿಸಿದಂತಾಗುತ್ತದೆ ಎಂದು ಧೋನಿ ಹೇಳಿದ್ದಾರೆ.

ಮುಂದಿನ ವರ್ಷ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ತಂಡಗಳೊಂದಿಗೆ ಸೆಣಸಾಡುವುದು ಕೂಡಾ ಉತ್ತಮ ಅನುಭವಗಳಲ್ಲೊಂದು. ಎಲ್ಲ ಆಟಗಾರರಂತೆ, ಜಗತ್ತಿನಾದ್ಯಂತವಿರುವ ಕ್ರಿಕೆಟ್ ಅಭಿಮಾನಿಗಳಂತೆ ನಾನು ಕೂಡಾ ವಿಶ್ವಕಪ್‌ನ್ನು ಅತ್ಯುತ್ಸಾಹದಿಂದ ಎದುರು ನೋಡುತ್ತಿದ್ದೇನೆ ಎಂದಿದ್ದಾರೆ ಧೋನಿ.

ಮುಂದಿನ ತಿಂಗಳು ಆಸ್ಟ್ರೇಲಿಯಾ ಪ್ರವಾಸ ಪಂದ್ಯ ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.