ಸುರಕ್ಷೆಗಾಗಿ ಗರ್ಭ ಪರೀಕ್ಷೆ ಮಾಡುವುದು ಅಗತ್ಯ: ಮೇರಿಕೋಮ್
ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಮುನ್ನ ಮಹಿಳಾ ಬಾಕ್ಸರ್‌ಗಳಿಗೆ ಗರ್ಭ ಪರೀಕ್ಷೆ ಮಾಡಬೇಕು ಎನ್ನುವ...

ನವದೆಹಲಿ: ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಮುನ್ನ ಮಹಿಳಾ ಬಾಕ್ಸರ್‌ಗಳಿಗೆ ಗರ್ಭ ಪರೀಕ್ಷೆ ಮಾಡಬೇಕು ಎನ್ನುವ ನಿಲುವಿಗೆ ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಎಂಸಿ ಮೇರಿ ಕೋಮ್ ಸಹಮತ ಸೂಚಿಸಿದ್ದಾರೆ.
ದೊಡ್ಡ ದೊಡ್ಡ ಕ್ರೀಡಾಕೂಟದಲ್ಲಿ ಭಾಗವಹಿಸುವ ಮುನ್ನ ಗರ್ಭ ಪರೀಕ್ಷೆ ಕಡ್ಡಾಯವಾಗಿ ಮಾಡಿಸಲೇಬೇಕು. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮುನ್ನ ಇಂಥಾ ಪರೀಕ್ಷೆಗೆ ಒಳಗಾಗಿದ್ದೇವೆ. ಈ ಸಮಸ್ಯೆ ಹಿರಿಯರಿಗೆ ಅಥವಾ ಕಿರಿಯರಿಗೆ ಮಾತ್ರ ಸಂಬಂಧಿಸಿದ್ದಲ್ಲ. ನನ್ನ ಅಭಿಪ್ರಾಯವೇನೆಂದರೆ ರಿಂಗ್ ಒಳಗೆ ಪ್ರವೇಶಿಸುವ ಮುನ್ನ, ನಮ್ಮ ಮುಂದಿನ ಜನಾಂಗದ ಬಗ್ಗೆ ಕಾಳಜಿ ವಹಿಸುವುದೊಳಿತು.
ಕಳೆದ 2-3ವರ್ಷಗಳಲ್ಲಿ ಇಂಥಾ ಪರೀಕ್ಷೆಗಳನ್ನು ನಡೆಸುತ್ತಿರಲಿಲ್ಲ. ಇದು ನಮ್ಮ ಸುರಕ್ಷೆಗಾಗಿಯೇ ಮಾಡಲಾಗುತ್ತದೆ ಎಂಬುದು ನಮಗೆ ಗೊತ್ತು. ರಿಂಗ್‌ನಲ್ಲಿ ಭಾರತೀಯ ಅಥ್ಲೀಟ್‌ಗಳ ಬಗ್ಗೆ ಯಾವುದೇ ಕೆಟ್ಟ ಭಾವನೆ ಮೂಡಬಾರದು ಎಂದು ನಾನು ಬಯಸುತ್ತೇನೆ. ಆದ್ದರಿಂದ ಗರ್ಭ ಪರೀಕ್ಷೆ ಮಾಡಿಸಬೇಕಾದ ಅಗತ್ಯವಿದೆ ಎಂದು ಮೇರಿಕೋಮ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


