ವಿಶ್ವ ಚೆಸ್ ಚಾಂಪಿಯನ್‌ಶಿಪ್: ವಿಶ್ವನಾಥನ್ ಗೆ ಗೆಲವಿನ ಆನಂದ
ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

ಸೋಚಿ: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವಿಶ್ವನಾಥನ್ ಆನಂದ್ ಮತ್ತೆ ಪುಟಿದೆದ್ದಿದ್ದಾರೆ.
ದ್ವಿತೀಯ ಪಂದ್ಯದಲ್ಲಿ ತಮ್ಮನ್ನು ಪರಾಭವಗೊಳಿಸಿದ್ದ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಮಂಗಳವಾರ ನಡೆದ ಮೂರನೇ ಪಂದ್ಯದಲ್ಲಿ ಗೆಲವು ಸಾಧಿಸುವ ಮೂಲಕ ನಾರ್ವೆ ಆಟಗಾರನಿಗೆ ಸೆಡ್ಡು ಹೊಡೆದಿದ್ದಾರೆ.
ಎರಡನೇ ಸುತ್ತಿನಲ್ಲಿ ಸೋಲನುಭವಿಸಿ ಒತ್ತಡಕ್ಕೆ ಸಿಲುಕಿದ್ದ ಆನಂದ್, ಈ ಪಂದ್ಯದಲ್ಲಿ ಉತ್ತಮ ತಂತ್ರಗಾರಿಕೆ ಪ್ರದರ್ಶಿಸಿದರು. ಆರಂಭಿಕ ಎರಡು ಪಂದ್ಯದಲ್ಲಿ ರಕ್ಷಣಾತ್ಮಕ ಆಟಕ್ಕೆ ಮುಂದಾಗಿದ್ದ ಆನಂದ್, ಈ ಪಂದ್ಯದಲ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಹಾಗಾಗಿ ಕೇವಲ 34 ನಡೆಗಳಲ್ಲಿ ಆನಂದ್ ಗೆಲವಿನ ನಗೆ ಬೀರಿದರು.
ಈ ಮೂಲಕ ಇಬ್ಬರೂ ಆಟಗಾರರು ತಲಾ 1.5 ಅಂಕಗಳನ್ನು ಗಳಿಸಿ 12 ಪಂದ್ಯಗಳ ಸರಣಿಯಲ್ಲಿ ಸಮಬಲ ಸಾಧಿಸಿದ್ದಾರೆ.
ಮೊದಲ ಪಂದ್ಯದಲ್ಲಿ ಡ್ರಾ ಸಾಧಿಸಿ ಒಂದು ಅಂಕವನ್ನು ಈ ಇಬ್ಬರೂ ಹಂಚಿಕೊಂಡಿದ್ದರು. 2ನೇ ಪಂದ್ಯದಲ್ಲಿ ಕಾರ್ಲ್‌ಸನ್ ಗೆಲವು ಸಾಧಿಸಿ ಒಂದು ಅಂಕ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


