ಫುಟ್ಬಾಲ್ ದಂತಕಥೆ ಪೀಲೆ ಆಸ್ಪತ್ರೆಗೆ ದಾಖಲು
ಜಗದ್ವಿಖ್ಯಾತ ಫುಟ್ಬಾಲ್ ದಂತಕಥೆ ಬ್ರೆಜಿಲ್‌ನ...

ಸೌಪೊಲೊ: ಜಗದ್ವಿಖ್ಯಾತ ಫುಟ್ಬಾಲ್ ದಂತಕಥೆ ಬ್ರೆಜಿಲ್‌ನ ಪೀಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಲ್ಪರ್ಟ್ ಐನ್‌ಸ್ಟೈನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೀಲೆಯವರು ಆಪ್ತ ಸ್ನೇಹಿತ ಜೋಸ್ ಫರ್ನೋಸ್ ರೊಡ್ರಿಗಸ್ ತಿಳಿಸಿದ್ದಾರೆ.
ಬುಧವಾರ ಇದ್ದಕ್ಕಿದ್ದಂತೆ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ತರುವಾಯ ಅವರೀಗ ಚೇತರಿಸಿಕೊಂಡಿದ್ದಾರೆ ಎಂದು ಜೋಸ್ ಹೇಳಿದ್ದಾರೆ.
ಬುಧವಾರ ಸಂಜೆ ಸ್ಥಳೀಯ ವಸ್ತುಸಂಗ್ರಹಾಲಯವೊಂದರಲ್ಲಿ ಪೀಲೆಯವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಪೀಲೆ ಅವರು ಅನಾರೋಗ್ಯ ಪೀಡಿತರಾದ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ ಎಂದು ಜೋಸ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


