ಕ್ರೀಡೆ

ಎರಡನೇ ಸ್ಥಾನಕ್ಕೇರಿದ ಕೊಹ್ಲಿ

ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಅಂತಿಮ ಏಕದಿನ ಕ್ರಿಕೆಟ್ ಪಂದ್ಯದಲ್ಲಿ

ಎರಡನೇ ಸ್ಥಾನಕ್ಕೇರಿದ ಕೊಹ್ಲಿ
ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ
Published On :

ದುಬೈ: ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಅಂತಿಮ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿ ಭಾರತದ ಗೆಲವಿಗೆ ಕಾರಣರಾದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರುವುದರೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತರಾಗಿದ್ದಾರೆ.

ರಾಂಚಿಯಲ್ಲಿ ನಡೆದ ಈ ಪಂದ್ಯದಲ್ಲಿ ಕೊಹ್ಲಿ ಅಜೇಯ 139 ರನ್ ಗಳಿಸಿದ್ದರು. ಇದೇ ಸರಣಿಯಲ್ಲಿ ಇದಕ್ಕೂ ಮುನ್ನ ಅವರು 66, 53 ಮತ್ತು 49 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಈ ಮಧ್ಯೆ ಕೋಲ್ಕತಾದಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿಶ್ವದಾಖಲೆಯ ದ್ವಿಶಕತ ಸಿಡಿಸಿದ್ದ ರೋಹಿತ್ ಶರ್ಮಾ(264) ರ್ಯಾಂಕಿಂಗ್‌ನಲ್ಲಿ ಒಟ್ಟು 18 ಸ್ಥಾನ ಮೇಲೇರಿದ್ದಾರೆ.

ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ಮಹೇಂದ್ರ ಸಿಂಗ್ ಧೋನಿ ಕ್ರಮವಾಗಿ 5ನೇ ಮತ್ತು 7ನೇ ಸ್ಥಾನಗಳಿಗೆ ತೃಪ್ತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಬ್ಯಾಟಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಭಾರತದ ಪರ ಭುವನೇಶ್ವರ ಕುಮಾರ್ (8ನೇ) ಮತ್ತು ಸ್ಪಿನ್ನರ್ ರವೀಂದ್ರ ಜಡೇಜಾ (10ನೇ) ಅವರು ಅಗ್ರ 10ರೊಳಗೆ ಸ್ಥಾನ ಹೊಂದಿರುವ ಆಟಗಾರರಾಗಿದ್ದಾರೆ. ಪಾಕಿಸ್ತಾನದ ಸಯೀದ್ ಅಜ್ಮಲ್ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದ ಗೌರವ ಪಡೆದಿದ್ದಾರೆ.

ಅಗ್ರಮಾನ್ಯ ಐವರು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ(4ನೇ ಸ್ಥಾನ) ಮಾತ್ರ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.