ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ
ಫುಟ್ಬಾಲ್ ದಂತಕಥೆ ಪೀಲೆ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತೀವ್ರ..

ಸೌಪೌಲೋ: ಫುಟ್ಬಾಲ್ ದಂತಕಥೆ ಪೀಲೆ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತೀವ್ರ ನಿಘಾ ಘಟಕಕ್ಕೆ ವರ್ಗಾಯಿಸಲಾಗಿದೆ..
ಮೂತ್ರ ನಾಳದ ಸೋಂಕಿಗೆ ಒಳಗಾಗಿದ್ದ ಅವರನ್ನು ಸೋಮವಾರ ನಗರದ ಅಲ್ಬರ್ಟ್ ಐನ್ಸ್ಟೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈವರೆಗದಿನ ಚಿಕಿತ್ಸೆ ನಂತರವೂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಲಿಲ್ಲ. ಅಲ್ಲದೆ 75 ವರ್ಷದ ಅವರು ವಯೋಸಂಬಂಧಿ ಸಮಸ್ಯೆಗಳಿಂಗ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೀಲೆ ಅವರ ವಾರ್ಡ್ ಬದಲಾಯಿಸಿರುವ ಬಗ್ಗೆ ಪ್ರಕಟಣೆ ಹೊರಡಿಸಿರುವ ಆಸ್ಪತ್ರೆಯ ಆಡಳಿತ ಮಂಡಳಿ, ಪೀಲೆ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಿರುವ ಹಿಂದಿರುವ ಕಾರಣವನ್ನು ಬಹಿರಂಗಗೊಳಿಸಿದೆ. 'ಸಾಮಾನ್ಯ ಚಿಕಿತ್ಸೆಗೆ ಪೀಲೆ ಅವರು ಸ್ಪಂದಿಸದ ಕಾರಣ, ಅವರನ್ನು ಉನ್ನತಮಟ್ಟದ ಚಿಕಿತ್ಸೆಗೆ ಒಳಪಡಿಸುವ ಅವಶ್ಯಕತೆ ಕಂಡುಬಂದಿತ್ತು. ಈ ಹಿನ್ನಲೆಯಲ್ಲಿ ಅವರನ್ನ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ' ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


