ಪಿವಿ ಸಿಂಧು ಮುಡಿಗೆ 'ಮಕಾವ್ ಗ್ರಾಂಡ್ ಪ್ರಿಕ್ಸ್ ಗೋಲ್ಡ್ ಸಿರೀಸ್'
ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮುಡಿಗೆ ಮತ್ತೊಂದು ಗರಿ ಸೇರಿದ್ದು, ಮಕಾವ್ ಗ್ರಾಂಡ್ ಪ್ರಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಸಿರೀಸ್ ಅನ್ನು ಗೆದ್ದುಕೊಂಡಿದ್ದಾರೆ.

ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮುಡಿಗೆ ಮತ್ತೊಂದು ಗರಿ ಸೇರಿದ್ದು, ಮಕಾವ್ ಗ್ರಾಂಡ್ ಪ್ರಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಸಿರೀಸ್ ಅನ್ನು ಗೆದ್ದುಕೊಂಡಿದ್ದಾರೆ.
ಮಕಾವ್‌ನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಪಿವಿ ಸಿಂಧು ದಕ್ಷಿಣ ಕೋರಿಯಾದ ಕಿಮ್ ಹ್ಯೋ ಮಿನ್ ವಿರುದ್ಧ 21-12 21-17 ನೇರ ಸೆಟ್‌ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಸುಮಾರು 45 ನಿಮಿಷ ನಡೆದ ಈ ಪಂದ್ಯದಲ್ಲಿ 11ನೇ ಶ್ರೇಯಾಂಕಿತ ಆಟಗಾರ್ತಿ ಸಿಂಧು 91ನೇ ಶ್ರೇಯಾಂಕಿತ ಆಟಗಾರ್ತಿ ಕಿಮ್ ಹ್ಯೋ ಮಿನ್‌ರನ್ನು ಸುಲಭವಾಗಿ ಮಣಿಸಿದರು.
ಪಂದ್ಯದ ಆರಂಭದಲ್ಲಿ ಕಿಮ್ ಹ್ಯೋ ಮಿನ್ ಕೊಂಚ ಆಕ್ರಮಣಕಾರಿ ಆಟಕ್ಕೆ ಮೊರೆ ಹೊದರಾದರೂ ಹಿನ್ನಡೆ ಅನುಭವಿಸಿದರು. ಆದರೆ ನಿಧಾನಗತಿಯಲ್ಲಿ ಆಟವನ್ನು ಆರಂಭಿಸಿದ ಸಿಂಧು ಸಮಯ ಕಳೆದಂತೆ ತಮ್ಮ ಬಲವಾದ ರಿವರ್ಸ್‌ನಿಂದಾಗಿ ಆಟದ ಮೇಲೆ ಹಿಡಿತ ಸಾಧಿಸಿದರು. ಅಂತಿಮವಾಗಿ ಸಿಂಧು 21-12 21-17 ನೇರ ಸೆಟ್‌ಗಳ ಅಂತರದಿಂದ ಅಮೋಘ ಜಯ ಸಾಧಿಸಿದರು. ಸಿಂಧು ಪಾಲಿಗೆ ಇದು ಪ್ರಸಕ್ತ ಋತುವಿನ ಮೊದಲ ಪ್ರಶಸ್ತಿಯಾಗಿದ್ದು, ಪ್ರಶಸ್ತಿಯು 1, 20,000 ಯುಎಸ್ ಡಾಲರ್ ಮೊತ್ತವನ್ನು ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


