ಏಷ್ಯನ್ ಗೇಮ್ಸ್: ಭಾರತದ ಮಹಿಳಾ ಮತ್ತು ಪುರುಷರ ಕಬಡ್ಡಿ ತಂಡಕ್ಕೆ ಚಿನ್ನ
ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದೂವರೆದಿದ್ದು,..

ಇಂಚಾನ್: ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದೂವರೆದಿದ್ದು, ಶುಕ್ರವಾರ ಮಹಿಳಾ ಮತ್ತು ಪುರುಷರ ಕಬಡ್ಡಿ ತಂಡ ಚಿನ್ನದ ಪದಕಗಳನ್ನು ಗೆದ್ದುಕೊಂಡಿವೆ.
ಸಿಯೋನಾಕ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡ ಇರಾನ್ ವಿರುದ್ಧ 31-21 ಅಂಕಗಳ ಅಂತರದಿಂದ ಗೆಲುವು ಸಾಧಿಸಿದರೆ, ಅದೇ ಇರಾನ್ ವಿರುದ್ಧ ಭಾರತದ ಪುರುಷರ ತಂಡ 27-25 ಅಂಕಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.
ಪುರುಷರ ಕಬಡ್ಡಿ ತಂಡಕ್ಕಿದು ಏಷ್ಯನ್ ಗೇಮ್ಸ್‌ನಲ್ಲಿ ಸತತ 7ನೇ ಬಾರಿಯ ಚಿನ್ನದ ಸಾಧನೆಯಾಗಿದೆ. ಇದರೊಂದಿಗೆ ಭಾರತ ಈವರೆಗೆ ಒಟ್ಟು 11 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


