ಏಪ್ರಿಲ್ 7ರಂದು ಐಪಿಎಲ್ ಗೆ ಅದ್ದೂರಿ ಚಾಲನೆ
ಐಪಿಎಲ್ 8ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಏ.7ರಂದು ಕೋಲ್ಕತಾದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.

ಕೋಲ್ಕತಾ: ಐಪಿಎಲ್ 8ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಏ.7ರಂದು ಕೋಲ್ಕತಾದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಈ ಸಮಾರಂಭದಲ್ಲಿ ಬಾಲಿವುಡ್ ನಟರು ಸೇರಿದಂತೆ ಖ್ಯಾತ ಕಲಾವಿದರೂ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರ ಪಟ್ಟಿಯನ್ನು ಬಿಸಿಸಿಐ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಸಮಾರಂಭ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಮೊದಲ ಪಂದ್ಯ ಏ.8ರಂದು ಈಡನ್ ಗಾರ್ಡನ್ ನಲ್ಲಿ ನಡೆಯಲಿದ್ದು, ಕೋಲ್ಕತಾ ನೈಟ್ ರೈಡರ್ಸ್-ಮುಂಬೈ ಇಂಡಿಯನ್ಸ್ ಸೆಣಸಲಿವೆ.
ಸ್ಟಾರ್ಕ್ ಅಲಭ್ಯ: ವಿಶ್ವಕಪ್ ನಲ್ಲಿ ಹೆಚ್ಚು ವಿಕೆಟ್ ಪಡೆದಿದ್ದ ಆಸೀಸ್ ನ ಮಿಚೆಲ್ ಸ್ಟಾರ್ಕ್ ಮಂಡಿ ನೋವಿನಿಂದ ಬಳಲುತ್ತಿದ್ದು, ಆರಂಭಿಕ ಪಂದ್ಯಗಳಲ್ಲಿ ಆರ್ಸಿಬಿ ಪರ ಆಡುತ್ತಿಲ್ಲ. ಅವರಿಗೆ 2-3 ವಾರ ವಿಶ್ರಾಂತಿ ಅಗತ್ಯವಿದೆ ಎಂದು ತಿಳಿದುಬಂದಿದೆ.
ಐ-ಲೀಗ್ ಪಂದ್ಯಗಳ ಸ್ಥಳಾಂತರ: ಐಪಿಎಲ್ ಉದ್ಘಾಟನ ಸಮಾರಂಭ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ 2 ಐ-ಲೀಗ್ ಫುಟ್ಬಾಲ್ ಪಂದ್ಯಗಳನ್ನು ಬಾರಸಾತ್ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ಸ್ಪೋರ್ಟಿಂಗ್ ಗೋವಾ ಮತ್ತು ರಾಯಲ್ ವಾಹಿಂಗ್ಡೊ ಹಾಗೂ ಬೆಂಗಳೂರು ಎಫ್ ಸಿ ಮತ್ತು ಮುಂಬೈ ಎಫ್ ಸಿ ನಡುವಣ ಪಂದ್ಯಗಳು ಸ್ಥಳಾಂತರವಾಗಲಿದೆ ಎಂದು ವರದಿಗಳು ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


