ಕ್ರೀಡೆ

ಬಾಂಗ್ಲಾ ಪ್ರವಾಸ ರದ್ದಿಗೆ ಬಿಸಿಸಿಐಗೆ ಒತ್ತಡ

ಮುಂಬರುವ ಜೂನ್ ತಿಂಗಳಲ್ಲಿ ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಭಾರತೀಯ...

ಬಾಂಗ್ಲಾ ಪ್ರವಾಸ ರದ್ದಿಗೆ ಬಿಸಿಸಿಐಗೆ ಒತ್ತಡ
ಎನ್. ಶ್ರೀನಿವಾಸನ್ ಮತ್ತು ಮುಸ್ತಾಫ್ ಕಮಲ್
Published On :

ಢಾಕಾ/ಕೋಲ್ಕತಾ: ಮುಂಬರುವ ಜೂನ್ ತಿಂಗಳಲ್ಲಿ ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ವಾರದೊಳಗೆ ಈ ಕುರಿತು ತುರ್ತು ಸಭೆ ನಡೆಸುವ ಸಾಧ್ಯತೆ ಇದೆ.

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷರೂ ಆಗಿರುವ ಮುಸ್ತಾಫ್  ಕಮಲ್, ಬಿಸಿಸಿಐ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ವಿರುದ್ಧ ತೀವ್ರ ಟೀಕೆ ಮಾಡಿದ ಬೆನ್ನಲ್ಲಿ ಗುರುವಾರ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.

ಕಮಲ್ ಅವರು ಶ್ರೀನಿವಾಸನ್ ವಿರುದ್ಧ ಕಿಡಿ ಕಾರಿರುವುದರಿಂದ ಬಿಸಿಸಿಐ ಈ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ಮಂಡಳಿಯ ಉನ್ನತ ಅಧಿಕಾರಿಯೊಬ್ಬರು ವೆಬ್‍ಸೈಟ್‍ವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಸ್ತಾಫ್  ಕಮಲ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯ ನಿರಾಕರಿಸಿದ್ದಾರೆ. ಅಲ್ಲದೆ ಮಂಡಳಿಯ ಸದಸ್ಯರೊಂದಿಗೆ ಪರಿಸ್ಥಿತಿ ಕುರಿತು ಚರ್ಚಿಸಬೇಕಿದೆ ಎಂದು ತಿಳಿಸಿದ್ದಾರೆ.

ಆದರೆ ಬಿಸಿಸಿಐನಲ್ಲಿರುವ ಶ್ರೀನಿ ವಾಸನ್ ಬೆಂಬಲಿತ ಸದಸ್ಯರು ತುರ್ತು ಸಭೆ ನಡೆಸಲು ಒತ್ತಾಯಿಸುತ್ತಿದ್ದಾರೆ. ಈ ಸದಸ್ಯರು ಜೂನ್‍ನಲ್ಲಿ ಭಾರತ ತಂಡದ ಬಾಂಗ್ಲಾ ಪ್ರವಾಸವನ್ನು ಬಿಸಿಸಿಐ ರದ್ದು ಮಾಡುವಂತೆ ಒತ್ತಡ ಹೇರುವ ಸಾಧ್ಯತೆಗಳಿವೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಬಿಸಿಸಿಐನಲ್ಲಿ ಶ್ರೀನಿವಾಸನ್‍ರ ಎದುರಾಳಿ ಬಣದ ಸದಸ್ಯರು ಸಹ ಇದ್ದು, ಈ ನಿರ್ಧಾರ ಕೈಗೊಳ್ಳುವುದನ್ನು ವಿರೋಧಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಕಮಲ್ ಅವರು ಶ್ರೀನಿವಾಸನ್ ವಿರುದ್ಧ ವಾಗ್ದಾಳಿ ನಡೆಸಿರುವುದು ವೈಯಕ್ತಿಕ ವಿಚಾರ.

ಹಾಗಾಗಿ ಬಿಸಿಸಿಐ ರಾಜತಾಂತ್ರಿಕ ಸಮಸ್ಯೆಗೆ ಸಿಲುಕಲು ಇಚ್ಛಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇನ್ನು ವಿದೇಶಾಂಗ ನೀತಿಯ ವಿಶ್ಲೇಷಕರ ಪ್ರಕಾರ ಭಾರತ ತಂಡದ ಬಾಂಗ್ಲಾ ಪ್ರವಾಸರದ್ದಾದರೆ, ಉಭಯ ದೇಶಗಳ ರಾಜತಾಂತ್ರಿಕ ವಿಷಯದಲ್ಲಿ ದೊಡ್ಡ ಸಮಸ್ಯೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.