ಕ್ರೀಡೆ

ರಾಜಸ್ಥಾನ ಸಂಪೂರ್ಣ ಸಜ್ಜಾಗಿದೆ: ದ್ರಾವಿಡ್

ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡ ತವರು ಅಂಗಣ ಸವಾಯಿ ಮಾನ್‍ಸಿಂಗ್ ಕ್ರೀಡಾಂಗಣದಲ್ಲಿ ಈ ಬಾರಿ ಒಂದೂ ಪಂದ್ಯವನ್ನು ಆಡುತ್ತಿಲ್ಲ...

ರಾಜಸ್ಥಾನ ಸಂಪೂರ್ಣ ಸಜ್ಜಾಗಿದೆ: ದ್ರಾವಿಡ್
ರಾಹುಲ್ ದ್ರಾವಿಡ್
Published On :

ಜೈಪುರ: ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡ ತವರು ಅಂಗಣ ಸವಾಯಿ ಮಾನ್‍ಸಿಂಗ್ ಕ್ರೀಡಾಂಗಣದಲ್ಲಿ ಈ ಬಾರಿ ಒಂದೂ ಪಂದ್ಯವನ್ನು ಆಡುತ್ತಿಲ್ಲ. ಬೇರೆ ನಗರಗಳಲ್ಲಿ ಪಂದ್ಯಗಳನ್ನು ಆಡುತ್ತಿದ್ದರೂ ಯಾವುದೇ ಪಿಚ್‍ಗೂ ಒಗ್ಗಿಕೊಂಡು ಉತ್ತಮ ಪ್ರದರ್ಶನ ನೀಡಲು ತಂಡ ಸಂಪೂರ್ಣ ಸಜ್ಜಾಗಿದೆ ಎಂದು ತಂಡದ ಮಾರ್ಗದರ್ಶಕ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ಕಳೆದ ಬಾರಿ ಅಹ್ಮದಾಬಾದ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡ ತವರಿನ ಪಂದ್ಯಗಳನ್ನಾಡಿತ್ತು. ಆದರೆ ಈ ಬಾರಿ ರಾಜಸ್ಥಾನ ತಂಡ ಅಹ್ಮದಾಬಾದ್ ಹಾಗೂ ಮುಂಬೈನಲ್ಲಿ ತನ್ನ ತವರು ಪಂದ್ಯವನ್ನಾಡಲಿದೆ. ರಾಜಸ್ಥಾನ ರಾಯಲ್ಸ್ ತಂಡ ತನ್ನ ತವರಿನ ಪಂದ್ಯಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ ಎಂದು ದ್ರಾವಿಡ್ ಒಪ್ಪಿಕೊಂಡಿದ್ದಾರೆ.

ಜೈಪುರದ ತವರಿನ ಪಂದ್ಯದ ಕೊರತೆ ಅನುಭವಿಸುತ್ತೇವೆ. ಜೈಪುರದಲ್ಲಿ ನಮ್ಮ ತಂಡ ಅತ್ಯುತ್ತಮ ಪ್ರದರ್ಶನ ನೀಡಿರುವ ದಾಖಲೆ ಇದೆ. ಅಲ್ಲಿನ ಪಿಚ್‍ಗೆ ಉತ್ತಮವಾಗಿ ಹೊಂದಿಕೊಂಡಿದ್ದೆವು. ಕಳೆದ ವರ್ಷ ಅಹ್ಮದಾಬಾದ್‍ನಲ್ಲಿ ನಾವು ಆಡಿದ್ದು ನೆರವಾಗಿತ್ತು. ಮುಂಬೈನಲ್ಲಿರುವ ಬ್ರೆಬೊರ್ನ್ ಕ್ರೀಡಾಂಗಣ ಸಹ ಕ್ರಿಕೆಟ್ ಆಡಲು ಅತ್ಯುತ್ತಮ ಪಿಚ್  ಎಂದು ದ್ರಾವಿಡ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.