ಕ್ರೀಡೆ

ಪ್ರಶಸ್ತಿ ಗೆದ್ದ ಸಾನಿಯಾ ವಿಶ್ವ ನಂ.! ಪಟ್ಟಕ್ಕೆ ಲಗ್ಗೆ

ಪ್ರಶಸ್ತಿ ಗೆದ್ದ ಸಾನಿಯಾ ವಿಶ್ವ ನಂ.! ಪಟ್ಟಕ್ಕೆ ಲಗ್ಗೆ
ಸಾನಿಯಾ ಮಿರ್ಜ - ಮಾರ್ಟಿನಾ ಹಿಂಗಿಸ್
Published On :

ಚಾರ್ಲ್ಸ್‌ಟನ್: ಭಾರತ ಸಾನಿಯಾ ಮಿರ್ಜಾ ಮತ್ತು ಸ್ವಿಜರ್‌ಲೆಂಡ್‌ನ ಮಾರ್ಟಿನಾ ಹಿಂಗಿಸ್ ಫ್ಯಾಮಿಲಿ ಸರ್ಕಲ್ ಕಪ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸಾನಿಯಾ ಮಿರ್ಜಾ ಮತ್ತಿ ಹಿಂಗಿಸ್ ಜೋಡಿ 6-0, 6-4 ನೇರ ಸೆಟ್‌ಗಳಿಂದ ಆಸ್ಟ್ರೇಲಿಯಾದ ಕ್ಯಾಸಿ ಡೆಲಾಕ್ವಾ ಮತ್ತು ಕ್ರೊವೇಷಿಯಾದ ಡಾರಿಜಾ ಜುರಾಕ್ ಅವರನ್ನು ಫರಾಭವಗೊಳಿಸಿ ಈ ಸಾಧನೆ ಮಾಡಿದರು. ಈ ಪ್ರಶಶ್ತಿಯು ಸಾನಿಯಾ-ಹಿಂಗಿಸ್ ಜೋಡಿಗೆ ಲಭಿಸಿದ ಸತತ 3ನೇ ಪ್ರಶಸ್ತಿಯಾಗಿದೆ.

ಈ ಪ್ರಶಸ್ತಿಯೊಂದಿಗೆ ಸಾನಿಯಾ ಮಿರ್ಜಾ ಮಹಿಳೆಯರ ಡಬಲ್ಸ್ ರ್ಯಾಂಕಿಂಗ್‌ನಲ್ಲಿ ಮೊದ ಬಾರಿಗೆ ವಿಶ್ವದ ನಂಬರ್ ಒನ್ ಆಟಗಾರ್ತಿಯ ಸ್ಥಾನ ಅಲಂಕಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸಾನಿಮಾ ಪಾತ್ರರಾಗಿದ್ದಾರೆ.

ಸಾನಿಯಾ ಮಿರ್ಜಾ ಅವರು ನಂಬರ್ ಒನ್ ಪಟ್ಟಕ್ಕೇರಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆಷ್ಟೇ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.