ಟೀಂ ಇಂಡಿಯಾಗೆ ಸೌರವ್ ಗಂಗೂಲಿ ಕೋಚ್?
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಟೀಂ ಇಂಡಿಯಾದ ನೂತನ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ.

ಕೋಲ್ಕತಾ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಟೀಂ ಇಂಡಿಯಾದ ನೂತನ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆಯ ಮೂಲಗಳ ಪ್ರಕಾರ, ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರನ್ನು ಭೇಟಿ ಮಾಡಿ, ಭಾರತೀಯ ಕ್ರಿಕೆಟ್ ತಂಡಕ್ಕೆ ಕೋಚ್ ಆಗುವ ಹಿಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಭಾರತೀಯ ಕ್ರಿಕೆಟ್ ತಂಡದ ಕೋಚ್ ಡೆಂಕನ್ ಫ್ಲೆಚರ್ ಅವರು ಶೀಘ್ರವೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದು, ಅವರ ಸ್ಥಾನಕ್ಕೆ ಗಂಗೂಲ್ ಅಥವಾ ರಾಹುಲ್ ದ್ರಾವಿಡ್ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿವೆ. ಆದರೆ ವರದಿಗಳ ಪ್ರಕಾರ, ಒಬ್ಬ ಕ್ರಿಕೆಟಿಗನಾಗಿ ಮತ್ತು ನಾಯಕನಾಗಿ ಗಂಗೂಲಿ ಸಾಧನೆಯನ್ನು ಪರಿಗಣಿಸುವುದಾದರೆ ಕೋಚ್ ಸ್ಥಾನಕ್ಕೆ ಅವರೇ ಪ್ರಮುಖ ಸ್ಪರ್ಧಿ ಎನ್ನಲಾಗಿದೆ. ಆದಾಗ್ಯೂ ಗಂಗೂಲಿ ಅವರು ಕೋಚ್ ಹುದ್ದೆಗೆ ಅಧಿಕೃತವಾಗಿ ಇನ್ನು ಅರ್ಜಿ ಹಾಕಿಲ್ಲ.
ಗಂಗೂಲಿ ಅವರು ಅರ್ಜಿ ಸಲ್ಲಿಸಿದ ಬಳಿಕ, ಬಿಸಿಸಿಐ ಅಧಿಕಾರಿಗಳು ಮತ್ತು ಭಾರತ ತಂಡದ ಮಾಜಿ ನಾಯಕರು ಅವರನ್ನು ಸಂದರ್ಶನಕ್ಕೆ ಕರೆಯಲಿದ್ದಾರೆ.
ಇನ್ನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಬಿಸಿಸಿಐ ಅಧ್ಯಕ್ಷ ದಾಲ್ಮಿಯಾ ಅವರು, 10 ದಿನ ಕಾಯಿರಿ, ನಿಮಗೆ ಗೊತ್ತಾಗುತ್ತೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


