ಏಕದಿನ ರ್ಯಾಂಕಿಂಗ್ ಭಾರತಕ್ಕೆ 2ನೇ ಸ್ಥಾನ
ಭಾರತ ತಂಡ ನೂತನ ಏಕದಿನ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲೇ ಮುಂದುವರಿದಿದ್ದರೆ, ಆಸ್ಟ್ರೇಲಿಯಾ ನಂಬರ್ ಒನ್ ಸ್ಥಾನದಲ್ಲಿದೆ.

ದುಬೈ: ಭಾರತ ತಂಡ ನೂತನ ಏಕದಿನ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲೇ ಮುಂದುವರಿದಿದ್ದರೆ, ಆಸ್ಟ್ರೇಲಿಯಾ ನಂಬರ್ ಒನ್ ಸ್ಥಾನದಲ್ಲಿದೆ.
ಇತ್ತೀಚೆಗೆ ತವರಿನಲ್ಲೇ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ಐದನೇ ಬಾರಿಗೆ ಪ್ರಶಸ್ತಿಯ ಗರಿ ಮೂಡಿಸಿಕೊಂಡಿದ್ದ ಆಸ್ಟ್ರೇಲಿಯಾ ಒಟ್ಟು 122 ರೇಟಿಂಗ್ ಅಂಕಗಳನ್ನು ಪಡೆದಿದೆ. ಭಾರತ 6 ಅಂಕಗಳ ಅಂತರದಲ್ಲಿ (116 ಅಂಕ) ಆಸ್ಟ್ರೇಲಿಯಾಗಿಂತ ಹಿಂದೆ ಇದೆ.
ಉಳಿದಂತೆ, ದಕ್ಷಿಣ ಆಫ್ರಿಕಾ (112), ಶ್ರೀಲಂಕಾ (108), ನ್ಯೂಜಿಲೆಂಡ್ (107), ಇಂಗ್ಲೆಂಡ್ (101) ಮತ್ತು ಪಾಕಿಸ್ತಾನ (95) ತಂಡಗಳು ಕ್ರಮವಾಗಿ ಮೂರರಿಂದ ಏಳರವರೆಗಿನ ಸ್ಥಾನಗಳನ್ನು ಹಂಚಿಕೊಂಡಿವೆ. ಒಂದು ವೇಳೆ ಪಾಕಿಸ್ತಾನ ತಂಡ ಮುಂಬರುವ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-3ರ ಅಂತರದಲ್ಲಿ ಸೋಲನುಭವಿಸಿದರೆ, 7ನೇ ಸ್ಥಾನವನ್ನೂ ಕಳೆದುಕೊಳ್ಳಬೇಕಾಗುತ್ತದೆ.
ಈ ಮಧ್ಯೆ ಬ್ಯಾಟಿಂಗ್ ರ್ಯಾಂಕಿಂಗ್‍ನಲ್ಲಿ ಭಾರತದ ಮೂವರು ಆಟಗಾರರು ಅಗ್ರ ಹತ್ತರೊಳಗೆ ಸ್ಥಾನ ಹೊಂದಿದ್ದಾರೆ. ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿದ್ದರೆ, ಶಿಖರ್ ಧವನ್ 6ನೇ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ 8ನೇ ಸ್ಥಾನ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಮೊದಲ ಸ್ಥಾನದ ಗೌರವ ಪಡೆದಿದ್ದಾರೆ.
ಆದರೆ, ಬೌಲಿಂಗ್ ವಿಭಾಗದಲ್ಲಿ ಮಾತ್ರ ಭಾರತದ ಯಾವೊಬ್ಬ ದಾಳಿಕಾರನೂ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿಲ್ಲ. ವಿಶ್ವಕಪ್‍ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು, ಸರಣಿಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ನಂಬರ್ ಒನ್ ಸ್ಥಾನ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


