ಇಂಗ್ಲೆಂಡ್ ತಂಡಕ್ಕೆ ಇನಿಂಗ್ಸ್ ಮುನ್ನಡೆ
ಇಂಗ್ಲೆಂಡ್ ತಂಡದ ಸ್ಪಿನ್ನರ್ ಟ್ರೆಡ್‍ವೇಲ್ ಸ್ಪಿನ್ ಮೋಡಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಿನ್ನಡೆ ಅನುಭವಿಸಿದೆ...

ಆ್ಯಂಟಿಗುವಾ: ಇಂಗ್ಲೆಂಡ್ ತಂಡದ ಸ್ಪಿನ್ನರ್ ಟ್ರೆಡ್‍ವೇಲ್ ಸ್ಪಿನ್ ಮೋಡಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಿನ್ನಡೆ ಅನುಭವಿಸಿದೆ.
ಪಂದ್ಯದ ಮೂರನೇ ದಿನವಾದ ಬುಧವಾರದ ಆಟದಲ್ಲಿ ವೆಸ್ಟ್ ಇಂಡೀಸ್ ತಂಡ ಮೊದಲ ಇನಿಂಗ್ಸ್ ನಲ್ಲಿ 295 ರನ್‍ಗಳಿಗೆ ಆಲೌಟ್ ಆಯಿತು. ನಂತರ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ಮೂರನೇ ದಿನ ಆಟ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 116 ರನ್ ದಾಖಲಿಸಿದೆ. ಈ ಮೂಲಕ 220 ರನ್‍ಗಳ ಮುನ್ನಡೆ ಕಾಯ್ದುಕೊಂಡಿದೆ.
ಬ್ಲ್ಯಾಕ್‍ವುಡ್ ಶತಕ: ಎರಡನೇ ದಿನದಾಟದ ಮೊತ್ತ 4 ವಿಕೆಟ್‍ಗೆ 155 ರನ್‍ಗಳಿಂದ ಮೂರನೇ ದಿನದಾಟ ಆರಂಭಿಸಿದ ವೆಸ್ಟ್ ಇಂಡೀಸ್‍ಗೆ ಮಧ್ಯಮ ಕ್ರಮಾಂಕದಲ್ಲಿ ಜರ್ಮೈನ್
ಬ್ಲ್ಯಾಕ್‍ವುಡ್ ತಂಡಕ್ಕೆ ಆಸರೆಯಾಗಿ ನಿಂತರು. 220 ಎಸೆತಗಳಲ್ಲಿ 14 ಬೌಂಡರಿ 2 ಸಿಕ್ಸರ್ ನೆರವಿನಿಂದ ಅಜೇಯ 112 ರನ್ ದಾಖಲಿಸಿದರು. ಇವರಿಗೆ ಮತ್ತೊಂದೆಡೆ ಸರಿಯಾದ ಸಾಥ್ ದೊರೆಯದ ಹಿನ್ನೆಲೆಯಲ್ಲಿ ತಂಡ ಹಿನ್ನಡೆ ಅನುಭವಿಸಬೇಕಾಯಿತು.ಇಂಗ್ಲೆಂಡ್ ತಂಡದ ಪರ ಜೇಮ್ಸ್ ಟ್ರೆಡ್‍ವೆಲ್ 47 ರನ್ ನೀಡಿ 4 ವಿಕೆಟ್ ಕಬಳಿಸಿದರು. ಉಳಿದಂತೆ ಆ್ಯಂಡರ್ಸನ್ ಹಾಗೂ ಬ್ರಾಡ್ ತಲಾ 2 ಮತ್ತು ಜೊರ್ಡನ್ 1 ವಿಕೆಟ್ ಪಡೆದರು.
ಬ್ಯಾಲೆನ್ಸ್ ಆಟ: ಎರಡನೇ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡ ಆರಂಭದಲ್ಲೇ ಅಗ್ರ ಕ್ರಮಾಂಕದ ಇಬ್ಬರು ಬ್ಯಾಟ್ಸ್ ಮನ್ ಗಳನ್ನು ಕಳೆದುಕೊಂಡಿತು. ಈ ವೇಳೆ ಬಂದ ಗ್ಯಾರಿ ಬ್ಯಾಲೆನ್ಸ್ ಆಜೇಯ 44 ರನ್ ದಾಖಲಿಸುವ ಮೂಲಕ ತಂಡವನ್ನು ಮೇಲೆತ್ತಿದ್ದಾರೆ. ಉಳಿದಂತೆ ಜೋರೂಟ್ ಆಜೇಯ 32 ರನ್ ದಾಖಲಿಸಿ ಆಟ ಕಾಯ್ದಿರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


