ಕ್ರೀಡೆ

ಆರ್‌ಸಿಬಿ ವಿರುದ್ಧ ಮಂದಗತಿ ಬೌಲಿಂಗ್: ರೋಹಿತ್ ಗೆ 12 ಲಕ್ಷ ರು. ದಂಡ

ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮಂದಗತಿಯ ಬೌಲಿಂಗ್ ದಾಳಿ ಮಾಡಿದ ಹಿನ್ನೆಲೆಯಲ್ಲಿ ಮುಂಬೈ...

ಆರ್‌ಸಿಬಿ ವಿರುದ್ಧ ಮಂದಗತಿ ಬೌಲಿಂಗ್: ರೋಹಿತ್ ಗೆ 12 ಲಕ್ಷ ರು. ದಂಡ
ರೋಹಿತ್ ಶರ್ಮಾ
Published On :

ಬೆಂಗಳೂರು: ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮಂದಗತಿಯ ಬೌಲಿಂಗ್ ದಾಳಿ ಮಾಡಿದ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರು. ದಂಡ ವಿಧಿಸಲಾಗಿದೆ.

ಕಳೆದ ಭಾನುವಾರ ರಾತ್ರಿ 8 ಗಂಟೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ನಿಧಾನಗತಿಯ ಬೌಲಿಂಗ್ ದಾಳಿ ನಡೆಸಿದ್ದು ದಂಡಕ್ಕೆ ಕಾರಣವಾಗಿದೆ.

ನಿಗದಿತ ಓವರ್ ಗಳಲ್ಲಿ 209 ರನ್ ಗಳಿಸಿದ್ದ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ 18 ರನ್ ಗಳಿಂದ ಗೆಲುವು ಸಾಧಿಸುವ ಮೂಲಕ ಐಪಿಎಲ್ ಟೂರ್ನಿಯಲ್ಲಿ ಪ್ರಥಮ ಜಯ ದಾಖಲಿಸಿತ್ತು. ಐಪಿಎಲ್ ನೂತನ ನಿಯಮಾವಳಿಗಳ ಪ್ರಕಾರ ರೋಹಿತ್ ಶರ್ಮಾಗೆ ಈ ದಂಡ ವಿಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.