ವಿಂಡೀಸ್‍ಗೆ ಸ್ಯಾಮುಯೆಲ್ಸ್ ಆಸರೆ
ಆರಂಭಿಕ ಕುಸಿತದ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಮರ್ಲಾನ್ ಸ್ಯಾಮುಯೆಲ್ಸ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಆತಿಥೇಯ ವೆಸ್ಟ್...

ಗ್ರೆನೆಡಾ: ಆರಂಭಿಕ ಕುಸಿತದ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಮರ್ಲಾನ್ ಸ್ಯಾಮುಯೆಲ್ಸ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಆತಿಥೇಯ ವೆಸ್ಟ್ ಇಂಡೀಸ್ ತಂಡ, ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಹೋರಾಟ ನಡೆಸುವ ಸೂಚನೆ ನೀಡಿದೆ.
ಇಲ್ಲಿನ ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ಆರಂಭವಾದ ಎರಡನೇ ಟೆಸ್ಟ್
ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್ ತಂಡ ಮೊದಲ ದಿನದಾಟದ ಅಂತ್ಯಕ್ಕೆ 70 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 188 ರನ್ ಕಲೆ ಹಾಕಿದೆ.
ಪಂದ್ಯ ಆರಂಭಕ್ಕೂ ಮುನ್ನ ನಿರಂತರವಾಗಿ ಮಳೆ ಸುರಿದ ಪರಿಣಾಮ ಪಂದ್ಯವನ್ನು ತಡವಾಗಿ ಆರಂಭಿಸಲಾಯಿತು. ಹಾಗಾಗಿ ದಿನದಾಟದ ಆರಂಭದಲ್ಲಿ 79 ಓವರ್ ಆಡಿಸಲು ನಿರ್ಧರಿಸಲಾಯಿತು. ಆದರೆ ಮಂದಬೆಳಕಿನ ಕಾರಣ ಕೇವಲ 70 ಓವರ್ ಆಟ ಮಾತ್ರ ನಡೆಯಿತು.
ಮಳೆ ಬಿದ್ದ ನಂತರ ತೇವಾಂಶದಿಂದ ಕೂಡಿದ್ದ ಪಿಚ್‍ನಲ್ಲಿ ಆಂಗ್ಲ ಬೌಲರ್‍ಗಳು ಸ್ವಿಂಗ್ ಅಸ್ತ್ರವನ್ನು ಪರಿಣಾಮಕಾರಿಯಾಗಿ ಪ್ರಯೋಗಿಸಿದರು. ಆರಂಭಿಕ ಬ್ಯಾಟ್ಸ್‌ಮನ್ ಬ್ರಾಥ್‍ವೈಟ್ (1), ಡೆವೊನ್ ಸ್ಮಿತ್ (15) ಬೇಗನೆ ವಿಕೆಟ್ ಒಪ್ಪಿಸಿದರು. ಈ ವೇಳೆ ಕಣಕ್ಕಿಳಿದ ಮರ್ಲಾನ್ ಸ್ಯಾಮುಯೆಲ್ಸ್ ರಕ್ಷಣಾತ್ಮಕ ಆಟಕ್ಕೆ ಮುಂದಾದರು. 186 ಎಸೆತಗಳಲ್ಲಿ 13 ಬೌಂಡರಿಗಳ ನೆರವಿನಿಂದ ಅಜೇಯ 94 ರನ್ ದಾಖಲಿಸಿದ್ದಾರೆ.
ಉಳಿದಂತೆ ಡಾರೆನ್ ಬ್ರಾವೊ (35), ಚಂದ್ರಪಾಲ್ (1), ಬ್ಲ್ಯಾಕ್‍ವುಡ್ (26) ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದಾರೆ. ಇಂಗ್ಲೆಂಡ್ ತಂಡದ ಪರ ಕ್ರಿಸ್ ಜೊರ್ಡಾನ್ (2), ಆಂಡರ್ಸನ್, ಬ್ರಾಡ್, ಬೆನ್ ಸ್ಟೋಕ್ಸ್ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


