ಮತ್ತೆ ಕಣಕ್ಕಿಳಿಯಲು ಲೀ ಚಾಂಗ್ ಸಜ್ಜು
ಉದ್ದೀಪನ ಮದ್ದು ಸೇವನೆ ಆರೋಪದ ಹಿನ್ನೆಲೆಯಲ್ಲಿ ಎಂಟು ತಿಂಗಳ...

ಅಮಸ್ಟರ್ ಡ್ಯಾಮ್: ಉದ್ದೀಪನ ಮದ್ದು ಸೇವನೆ ಆರೋಪದ ಹಿನ್ನೆಲೆಯಲ್ಲಿ ಎಂಟು ತಿಂಗಳ ನಿಷೇಧದ ಶಿಕ್ಷೆ ಅನುಭವಿಸಿದ್ದ ಮಾಜಿ ವಿಶ್ವದ ನಂಬರ್ ಒನ್ ಬ್ಯಾಡ್ಮಿಂಟನ್ ಆಟಗಾರ ಲೀ ಚಾಂಗ್ ವಿ ಮೇ ತಿಂಗಳಲ್ಲಿ ಮತ್ತೆ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.
ಕಳೆದ ವರ್ಷ ಆಗಸ್ಟ್‍ನಲ್ಲಿ ನಡೆದ ವಿಶ್ವ ಚಾಂಪಿಯನ್‍ಶಿಪ್ ವೇಳೆ ಮಲೇಷ್ಯಾದ ಬ್ಯಾಡ್ಮಿಂಟನ್ ತಾರೆ ಲೀ ಚಾಂಗ್ ನಿಷೇಧಿತ ಉದ್ದೀಪನ ಮದ್ದು ಸೇವನೆ ಮಾಡಿದ ಆರೋಪ ಸಾಬೀತಾಗಿತ್ತು. ಹಾಗಾಗಿ ಕಳೆದ ವರ್ಷ ನವೆಂಬರ್ನಲ್ಲಿ ನಿಷೇಧದ ಶಿಕ್ಷೆ ಅನುಭವಿಸಿದ್ದರು.
ಈಗ ಅವರ ಶಿಕ್ಷೆಯ ಅವಧಿ ಕಡಿಮೆಗೊಳಿಸಲಾಗಿರುವ ಹಿನ್ನೆಲೆಯಲ್ಲಿ ಲೀ ಅವರು ಮೇ 1ರ ನಂತರ ಕಣಕ್ಕಿಳಿಯುವ ಅವಕಾಶವಿದೆ. ಲೀ ಅವರು ತಿಳಿಯದೇ ಆ ಉದ್ದೀಪನ ಮದ್ದು ಸೇವನೆ ಮಾಡಿದ್ದಾರೆ. ಅವರು ಉದ್ದೇಶಪೂರ್ವಕವಾಗಿ ಹಾಗೂ ಮೋಸಮಾಡುವ
ಉದ್ದೇಶದಿಂದ ಇದನ್ನು ಸೇವನೆ ಮಾಡಿಲ್ಲದಿರುವುದರಿಂದ ಅವರ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಲಾಗಿದೆ ಎಂದು ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


