ನನ್ನ ಮಗಳು ಸಿನಿಮಾದಲ್ಲಿ ನಟಿಸಲ್ಲ: ಸಚಿನ್ ಸ್ಪಷ್ಟನೆ
ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮಗಳು ಸರಾ ತೆಂಡೂಲ್ಕರ್ ಅವರು ಬಾಲಿವುಡ್ ಚಿತ್ರವೊಂದರಲ್ಲಿ ನಾಯಕಿಯಾಗಲಿದ್ದಾರೆ...

ಮುಂಬೈ: ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮಗಳು ಸರಾ ತೆಂಡೂಲ್ಕರ್ ಅವರು ಬಾಲಿವುಡ್ ಚಿತ್ರವೊಂದರಲ್ಲಿ ನಾಯಕಿಯಾಗಲಿದ್ದಾರೆ ಎಂಬ ವದಂತಿಗಳನ್ನು ಸಚಿನ್ ಅಲ್ಲಗಳೆದಿದ್ದಾರೆ.
ಮೂರ್ನಾಲ್ಕು ದಿನಗಳಿಂದ ಹಬ್ಬಿದ್ದ ಗಾಳಿ ಸುದ್ದಿಗಳ ಬಗ್ಗೆ ಟ್ವಿಟರ್‍ನಲ್ಲಿ ಕಿಡಿಕಾರಿರುವ ಅವರು, `ನನ್ನ ಮಗಳು ಇನ್ನೂ ವಿದ್ಯಾಭ್ಯಾಸದಲ್ಲಿ ನಿರತರಾಗಿದ್ದು, ಆಕೆ ಅದರಲ್ಲೇ ತಲ್ಲೀನಳಾಗಿದ್ದಾಳೆ.
ಆಕೆಗೆ ಸಿನಿಮಾ ನಾಯಕಿಯಾಗಬೇಕೆನ್ನುವ ಯಾವುದೇ ಗೀಳು ಇಲ್ಲ' ಎಂದಿದ್ದಾರೆ. 18 ವರ್ಷ ವಯಸ್ಸಿನ ಸರಾ ತೆಂಡೂಲ್ಕರ್ ಅವರು, ನಟ ಶಾಹೀದ್ ಕಪೂರ್ ನಾಯಕರಾಗಿರುವ ಚಿತ್ರವೊಂದರಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


