ವಾಂಖೆಡೆ ಕ್ರೀಡಾಂಗಣ ಪ್ರವೇಶಿಸದಂತೆ ಶಾರುಕ್ ಖಾನ್ ಮೇಲಿದ್ದ ನಿಷೇಧ ವಾಪಸ್
ವಾಂಖೆಡೆ ಕ್ರೀಡಾಂಗಣ ಪ್ರವೇಶಿಸದಂತೆ ನಟ ಶಾರೂಕ್ ಖಾನ್ ಗೆ ವಿಧಿಸಿದ್ದ ನಿಷೇಧವನ್ನು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ವಾಪಸ್ ಪಡೆದಿದೆ.

ಮುಂಬೈ: ವಾಂಖೆಡೆ ಕ್ರೀಡಾಂಗಣ ಪ್ರವೇಶಿಸದಂತೆ ನಟ ಶಾರೂಕ್ ಖಾನ್ ಗೆ ವಿಧಿಸಿದ್ದ ನಿಷೇಧವನ್ನು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ವಾಪಸ್ ಪಡೆದಿದೆ.
ಆಡಳಿತ ಮಂಡಳಿ ಸಭೆ ವೇಳೆ ಕೈಗೊಳ್ಳಲಾಗಿರುವ ಈ ನಿರ್ಧಾರವನ್ನು ಮುಂಬೈ ಕ್ರಿಕೆಟ್ ಸಂಸ್ಥೆ(ಎಂಸಿಎ) ಪತಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದೆ. ಶಾರುಕ್ ಖಾನ್ ಗೆ ವಿಧಿಸಿದ್ದ ನಿಷೇಧವನ್ನು ಹಿಂಪಡೆಯುವ ನಿರ್ಧಾರಕ್ಕೆ ಎಂಸಿಎ ಅಧ್ಯಕ್ಷ ಶರದ್ ಪವಾರ್ ಸಮ್ಮತಿಸಿದ್ದಾರೆ ಎಂದು ಎಂಸಿಎ ಉಪಾಧ್ಯಕ್ಷ ಆಶಿಶ್ ಶಿಲಾರ್ ತಿಳಿಸಿದ್ದಾರೆ.
ಅಗತ್ಯವಿದ್ದಾಗ ಶಾರುಕ್ ಖಾನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ, ಅದನ್ನು ಮುಂದುವರೆಸುವುದು ಸೂಕ್ತ ಅಲ್ಲ ಎಂಬ ನಿರ್ಧಾರ ಆಡಳಿತ ಮಂಡಳಿ ಸಭೆಯಲ್ಲಿ ವ್ಯಕ್ತವಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ಮೂಲಗಳ ಪ್ರಕಾರ ನಿಷೇಧವನ್ನು ಹಿಂಪಡೆಯುವಂತೆ ಶಾರುಕ್ ಖಾನ್ ಶರದ್ ಪವಾರ್ ಗೆ ಮನವಿ ಮಾಡಿದ್ದರು ಎಂದು ಹೇಳಲಾಗಿದೆ.
ಮುಂಬೈ ನ ವಾಂಖೆಡೆ ಕ್ರೀಡಾಂಗಣದಲ್ಲಿ ಅನುಚಿತವಾಗಿ ನಡೆದುಕೊಂಡಿದ್ದಕ್ಕೆ 2012 ರಲ್ಲಿ ಶಾರುಕ್ ಖಾನ್ ಗೆ ನಿಷೇಧ ವಿಧಿಸಲಾಗಿತ್ತು. ಐಪಿಎಲ್ ತಂಡ ಕೊಲ್ಕತಾ ನೈಟ್ ರೈಡರ್ಸ್ ನ ಸಹ ಮಾಲಿಕರಾಗಿದ್ದ ಶಾರುಕ್ ಖಾನ್ ಪಂದ್ಯಾವಳಿ ನಡೆಯುತ್ತಿರಬೇಕಾದರೆ ವಾಂಖೆಡೆ ಕ್ರೀಡಾಂಗಣದಲ್ಲಿ ದುರ್ವರ್ತನೆ ತೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


