ಕ್ರೀಡೆ

2019ರ ವಿಶ್ವಕಪ್ ತಂಡದಲ್ಲಿ ನಾನಿರುವೆ: ಶ್ರೀಶಾಂತ್

2019ರಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ನಾನಾಡಲಿರುವೆ ಎಂದು ಕ್ರಿಕೆಟಿಗ ಶ್ರೀಶಾಂತ್ ಹೇಳಿದ್ದಾರೆ....

2019ರ ವಿಶ್ವಕಪ್ ತಂಡದಲ್ಲಿ ನಾನಿರುವೆ: ಶ್ರೀಶಾಂತ್
ಎಸ್ . ಶ್ರೀಶಾಂತ್
Published On :

ಕೊಚ್ಚಿ:  2019ರಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ನಾನಾಡಲಿರುವೆ ಎಂದು ಕ್ರಿಕೆಟಿಗ ಶ್ರೀಶಾಂತ್ ಹೇಳಿದ್ದಾರೆ.

ಶ್ರೀಶಾಂತ್ಗೆ ಬಿಸಿಸಿಐ ವಿಧಿಸಿರುವ ನಿಷೇಧವನ್ನು ಸದ್ಯ ಹಿಂತೆಗೆಯುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಹೇಳಿದ್ದರು. ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಕ್ರಿಕೆಟಿಗರು ಮತ್ತೆ ವಾಪಸ್ ಬರುವುದು ಕಷ್ಟ. ನ್ಯಾಯಾಲಯ ಅವರಿಗೆ ಕ್ಲೀನ್ ಚಿಟ್ ಕೊಟ್ಟಿದ್ದರೂ ಬಿಸಿಸಿಐ ಅವರ ಮೇಲೆ ಹೇರಿರುವ ನಿಷೇಧ ಹಿಂತೆಗೆದುಕೊಳ್ಳುವುದಿಲ್ಲ ಎಂದು ಸಂದರ್ಶನವೊಂದರಲ್ಲಿ ಠಾಕೂರ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶ್ರೀಶಾಂತ್ ನನ್ನನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡುವ ಬಗ್ಗೆ ಬಿಸಿಸಿಐ ಸಾಕಷ್ಟು ಸಮಯ ತೆಗೆದುಕೊಳ್ಳಲಿ, 2019ರ ವಿಶ್ವಕಪ್ ತಂಡದಲ್ಲಿ ನಾನಿರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅದೇ ವೇಳೆ ತನ್ನ ಬೆಂಬಲಕ್ಕೆ ನಿಂತ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಇತರ ಸಚಿವರಿಗೆ ಶ್ರೀಶಾಂತ್ ಧನ್ಯವಾದಗಳನ್ನರ್ಪಿಸಿದ್ದಾರೆ

 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.