ಅಶ್ವಿನ್‍ರಿಂದ ಆಲ್ರೌಂಡರ್ ಆಟದ ನಿರೀಕ್ಷೆಯಿದೆ: ವಿರಾಟ್ ಕೊಹ್ಲಿ
ತಮಿಳುನಾಡಿನ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಂದ ಸವ್ಯಸಾಚಿ ಆಟವನ್ನು ನಿರೀಕ್ಷಿಸುತ್ತಿರುವುದಾಗಿ ಟೀಂಇಂಡಿಯಾದ ಟೆಸ್ಟ್ ತಂಡದ ನಾಯಕ...

ಚೆನ್ನೈ: ತಮಿಳುನಾಡಿನ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಂದ ಸವ್ಯಸಾಚಿ
ಆಟವನ್ನು ನಿರೀಕ್ಷಿಸುತ್ತಿರುವುದಾಗಿ ಟೀಂಇಂಡಿಯಾದ ಟೆಸ್ಟ್ ತಂಡದ ನಾಯಕ
ವಿರಾಟ್ ಕೊಹ್ಲಿ ಹೇಳಿದ್ದಾರೆ.
ಶ್ರೀಲಂಕಾ ಪ್ರವಾಸಕ್ಕಾಗಿ ತೆರಳುವ ಮುನ್ನ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕವಿರಾಟ್ ಕೊಹ್ಲಿ , ಟೆಸ್ಟ್ ನಲ್ಲಿ ಅಶ್ವಿನ್, ಭುವನೇಶ್ವರ್ ಹಾಗೂ ಹರ್ಭಜನ್ ಸಿಂಗ್ ಬ್ಯಾಟಿಂಗ್ ನಲ್ಲೂ ತಂಡಕ್ಕೆ ನೆರವಾಗಬಲ್ಲ ಸಾಮರ್ಥ್ಯ ಹೊಂಜದಿದ್ದಾಪೆ. ಅಶ್ವಿನ್ ಬ್ಯಾಟಿಂಗ್ ನಲ್ಲಿ 40ರ ಸರಾಸರಿಯನ್ನು ಹೊಂದಿದ್ದಾರೆ. ಹಾಗಾಗಿ ಅವರು ಅಲ್ರೌಂಡರ್ ಸ್ಥಾನವನ್ನು ತುಂಬಲಿದ್ದಾರೆ ಎಂದರು.
ಇನ್ನು ಟೆಸ್ಟ್ ಸರಣಿಯಲ್ಲಿ 5 ಬೌಲರ್ಗಳನ್ನು ಕಣಕ್ಕಿಳಿಸುವ ಸುಳಿವು ನೀಡಿದ ಕೊಹ್ಲಿ, ಟೆಸ್ಟ್ ಪಂದ್ಯ ಗೆಲ್ಲಬೇಕಾದರೆ ಬಲಿಷ್ಠ ಬೌಲಿಂಗ್ ವಿಭಾಗ ಹೊಂದಿರಬೇಕು. ತಂಡದ ನಾಯಕನಾಗಿ ಪೂರ್ಣ ಪ್ರಮಾಣದ ಸರಣಿಯಲ್ಲಿ ಭಾಗವಹಿಸುತ್ತಿರುವುದು ಸಂತೋಷ ತಂದಿದೆ.
ಟೆಸ್ಟ್ ಪಂದ್ಯದಲ್ಲಿ ಎದುರಾಳಿ ತಂಡದ 20 ವಿಕೆಟ್ ಪಡೆಯುವತ್ತ ಗಮನ ಹರಿಸುತ್ತೇವೆ. ಹಾಗಾಗಿ ಮೂವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟರು . ಇನ್ನು ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ತಂಡದ ಯೋಜನೆಯನ್ನು ಪ್ರಯೋಗಿಸುತ್ತಿಲ್ಲ ಎಂದು ಹೇಳಿದ್ದ ಹೇಳಿಕೆಯನ್ನು ನಾನು ಸೇರಿದಂತೆ ಹೇಳಿದ್ದೆ. ಪಂದ್ಯದಲ್ಲಿ ತಂಡದ ಯೋಜನೆ ಸರಿ ಇಲ್ಲ ಎಂದು ಹೇಳಲಿಲ್ಲ. ತಂಡದ ಯೋಜನೆಯನ್ನು ನಾವು ಸರಿಯಾಗಿ ಬಳಸುತ್ತಿಲ್ಲ ಎಂದು ಹೇಳಿದ್ದಾಗಿ ತಿಳಿಸಿದರು.
ಇನ್ನು ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಮನೋಭಾವವನ್ನು ತಂಡದ ಆರಂಭಿಕ ಬ್ಯಾಟ್ಸ್ ಮೆನ್ ಶಿಕರ್ ಧವನ್ ಸಮರ್ಥಿಸಿ ಕೊಂಡಿದ್ದಾರೆ. ಕೊಹ್ಲಿ ಮೈದಾನದಲ್ಲಿ ಆಕ್ರಮಣಕಾರಿ ಮನೋಭಾವ ತೋರುತ್ತಾರೆ. ಅಲ್ಲದೆ ತಮ್ಮ ನಿಯಂತ್ರಣದಲ್ಲಿರುತ್ತಾರೆ. ಈ ಮನೋಭಾವ ಎದುರಾಳಿ ತಂಡಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಧವನ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


