ಲಂಕಾ ವಿರುದ್ಧ ಭಾರತಕ್ಕೆ ಜಯ
ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ವಾಲಿಬಾಲ್ ತಂಡ 18ನೇ ಏಷ್ಯನ್ ಹಿರಿಯರ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಜಯ...

ತೆಹ್ರಾನ್: ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ವಾಲಿಬಾಲ್ ತಂಡ 18ನೇ ಏಷ್ಯನ್ ಹಿರಿಯರ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಂಪಾದಿಸಿದೆ.
ಸೋಮವಾರ ನಡೆದ ಪಂದ್ಯದಲ್ಲಿ ಭಾರತ ತಂಡ 3-0 (25-17, 25-22, 25-20) ಗೇಮ್‌ಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಪಂದ್ಯದ ಆರಂಭದಿಂದ ಅಂತ್ಯದವರೆಗೂ ಶ್ರೀಲಂಕಾ ತಂಡದ ವಿರುದ್ಧ ಪ್ರಾಬಲ್ಯ ಮೆರೆದ ಭಾರತೀಯ ತಂಡ, ಎದುರಾಳಿ ಆಟಗಾರರ ಮೇಲೆ ಬಿಗಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಯಿತು.
ಪಂದ್ಯದ ಯಾವುದೇ ಗೇಮ್‌ನಲ್ಲಿ ಹಿನ್ನಡೆ ಅನುಭವಿಸದೇ ಸ್ಥಿರ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದ ಭಾರತ ತಂಡ, ಅರ್ಹ ಗೆಲುವು ಸಂಪಾದಿಸಿತು. ಈ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಭಾರತ ತಂಡ ಮಂಗಳವಾರ ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಬ್ರಹೈನ್ ವಿರುದ್ಧ ಸೆಣಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


