ಫುಟ್ ಬಾಲ್: ಭಾರತಕ್ಕೆ 156 ನೇ ಶ್ರೇಯಾಂಕ
ಫಿಫಾ ಬಿಡುಗಡೆ ಮಾಡಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತೀಯ ಫುಟ್ ಬಾಲ್ ತಂಡ 156 ನೇ ಸ್ಥಾನದಲ್ಲೇ ಮುಂದುವರೆದಿದ್ದರೆ ವಿಶ್ವ ಚಾಂಪಿಯನ್ ಜರ್ಮನಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ನವದೆಹಲಿ: ಇತ್ತೀಚೆಗೆ ಫಿಫಾ ಬಿಡುಗಡೆ ಮಾಡಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತೀಯ ಫುಟ್ ಬಾಲ್ ತಂಡ 156 ನೇ ಸ್ಥಾನದಲ್ಲೇ ಮುಂದುವರೆದಿದ್ದರೆ ವಿಶ್ವ ಚಾಂಪಿಯನ್ ಜರ್ಮನಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ಕಳೆದ ತಿಂಗಳು 2018ರ ವಿಶ್ವಕಪ್ ಅರ್ಹತಾ ಪಂದ್ಯಾವಳಿಗಾಗಿನ ಎರಡು ಪಂದ್ಯಗಳಲ್ಲಿ ಓಮನ್ ಹಾಗೂ ಗುವಾಮ್ ವಿರುದ್ಧ ಸೋಲನುಭವಿಸಿದ ಸೋಲನುಭವಿಸಿದ ಫಲವಾಗಿ 15 ಸ್ಥಾನ ಕುಸಿತ ಕಂಡ ಭಾರತ ಪ್ರಸಕ್ತ 160 ರೇಟಿಂಗ್ ಪಾಯಿಂಟ್ಸ್ ಗಳಿಸಿದೆ. ಹೀಗಾಗಿ ಏಷ್ಯಾದ ಕಿರ್ಗಿಸ್ತಾನದೊಂದಿಗೆ ಭಾರತ 156ನೇ ಸ್ಥಾನವನ್ನು ಹಂಚಿಕೊಂಡಿದೆ. ನೆರೆಯ ಪಾಕಿಸ್ತಾನ 171ನೇ ಸ್ಥಾನದಲ್ಲಿದೆ.
ಇನ್ನುಳಿದಂತೆ ಪಿಫಾ ರ್ಯಾಂಕಿಂಗ್ ಪಟ್ಟಿಯಲ್ಲಿ ಅರ್ಜೆಂಟೀನಾ ನಂ.1 ಸ್ಥಾನದಲ್ಲಿದ್ದರೆ, ಬೆಲ್ಜಿಯಂ 2ನೇ ಸ್ಥಾನಕ್ಕೆ ಜಿಗಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


