ಫಿಕ್ಸಿಂಗ್: ಇಂದು ತುರ್ತು ವಿಚಾರಣೆ
ಆರನೇ ಐಪಿಎಲ್ ಪಂದ್ಯಾವಳಿಯಲ್ಲಿನ ಸ್ಪಾಟ್ ಫಿಕ್ಸಿಂಗ್ ಕುರಿತು ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ನೇತೃತ್ವದ ತ್ರಿಸದಸ್ಯ ಸಮಿತಿ...

ನವದೆಹಲಿ: ಆರನೇ ಐಪಿಎಲ್ ಪಂದ್ಯಾವಳಿಯಲ್ಲಿನ ಸ್ಪಾಟ್ ಫಿಕ್ಸಿಂಗ್ ಕುರಿತು ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ನೇತೃತ್ವದ ತ್ರಿಸದಸ್ಯ ಸಮಿತಿ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಮುಚ್ಚಿದ ಲಕೋಟೆಯಲ್ಲಿನ ಕೆಲ ಕ್ರಿಕೆಟಿಗರನ್ನೂ ಒಳಗೊಂಡಿರುವ 13 ಮಂದಿ ಹೆಸರಿರುವ ಪಟ್ಟಿಯನ್ನು ಮತ್ತೋರ್ವ ನಿವೃತ್ತ ನ್ಯಾ. ಆರ್.ಎಂ. ಲೋಧಾಗೆ ಹಸ್ತಾಂತರಿಸುವ ಅರ್ಜಿಯ ತುರ್ತು ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಅಸ್ತು ಎಂದಿದೆ.
ಹಗರಣದ ಕುರಿತು ನ್ಯಾ. ಮುಕುಲ್ ಸಮಿತಿ ಸಲ್ಲಿಸಿರುವ ವರದಿಯನ್ನು ಬಿಸಿಸಿಐ ಅನ್ನು ಸ್ವಚ್ಛಗೊಳಿಸುವ ಉಸ್ತುವಾರಿ ಹೊತ್ತಿರುವ ನ್ಯಾ. ಆರ್. ಎಂ. ಲೋಧಾ ಸಮಿತಿಗೆ ನೀಡದೆ ಹೋದರೆ ತನಿಖೆಗಾಗಿ ಪಟ್ಟ ಶ್ರಮವೆಲ್ಲಾ ವ್ಯರ್ಥವಾಗಿಬಿಡುತ್ತದೆ ಎಂದು ಬಿಹಾರ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಆದಿತ್ಯ ವರ್ಮಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಅವರ ಮನವಿಗೆ ಸ್ಪಂದಿಸಿರುವ ನ್ಯಾಯಾಲಯ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಸಲು ಮುಂದಾಗಿದೆ. ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿರುವುದು ವಿಶೇಷ. ನ್ಯಾ. ಮುಕುಲ್ ಮುದ್ಗಲ್ ಸಮಿತಿ ಸಲ್ಲಿಸಿರುವ ಮುಚ್ಚಿದ ಲಕೋಟೆಯಲ್ಲಿ ಸಿಸಿಐನ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಸೇರಿದಂತೆ ಕೆಲ ಪ್ರಮುಖ ಕ್ರಿಕೆಟಿಗರ ಹೆಸರುಗಳಿದ್ದು ಶುಕ್ರವಾರದ ವಿಚಾರಣೆ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


