ಕ್ರೀಡೆ

ಸ್ಪಾಟ್ ಫಿಕ್ಸಿಂಗ್ : ಹೆಸರು ಪ್ರಕಟಕ್ಕೆ ಸುಪ್ರೀಂ ನಕಾರ

ಆರನೇ ಐಪಿಎಲ್ ಸ್ಪಾಟ್ ಫಿಕ್ಸಿಂಗ್‍ಗೆ ಸಂಬಂಧಿಸಿದಂತೆ ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ನೇತೃತ್ವದ ತ್ರಿಸದಸ್ಯ ಸಮಿತಿ ಮುಚ್ಚಿದ...

ಸ್ಪಾಟ್ ಫಿಕ್ಸಿಂಗ್ : ಹೆಸರು ಪ್ರಕಟಕ್ಕೆ ಸುಪ್ರೀಂ ನಕಾರ
ಸುಪ್ರೀಂ ಕೋರ್ಟ್
Published On :

ನವದೆಹಲಿ: ಆರನೇ ಐಪಿಎಲ್ ಸ್ಪಾಟ್ ಫಿಕ್ಸಿಂಗ್‍ಗೆ ಸಂಬಂಧಿಸಿದಂತೆ ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ನೇತೃತ್ವದ ತ್ರಿಸದಸ್ಯ ಸಮಿತಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ಪಟ್ಟಿಯಲ್ಲಿನ ಹದಿಮೂರು ವ್ಯಕ್ತಿಗಳ ವರದಿಯನ್ನು ನ್ಯಾ.ಲೋಧ ಸಮಿತಿಗೆ ನೀಡಬೇಕೆಂಬ ಬಿಹಾರ ಕ್ರಿಕೆಟ್ ಸಂಸ್ಥೆಯ ಮನವಿ ಯನ್ನು ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಬಿಹಾರ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಆದಿತ್ಯ ವರ್ಮಾ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಶುಕ್ರವಾರ ತುರ್ತಾಗಿ ನಡೆಸಿದ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ನೇತೃತ್ವದ ತ್ರಿಸದಸ್ಯ ಪೀಠ, ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿತಲ್ಲದೆ, ಇದೇ ಡಿಸೆಂಬರ್ 31ರವರೆಗೂ ಬಿಸಿಸಿಐ ಅನ್ನು ಹೊಸ ನಿಯಮಾವಳಿಗಳೊಂದಿಗೆ ಪುನರ್ ರೂಪಿಸುವ ಸಂಬಂಧ ನೇಮಕವಾಗಿರುವ ನಿವೃತ್ತ ನ್ಯಾ. ಲೋಧಾ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಿತು.

ಅಂದಹಾಗೆ 2013ರ ಐಪಿಎಲ್ ಸ್ಪಾಟ್‍ಫಿಕ್ಸಿಂಗ್ ಹಗರಣದ ತನಿಖೆಗಾಗಿ ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ಸರ್ವೋಚ್ಚ ನ್ಯಾಯಾಲಯ ನೇಮಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.