ಜೈಪುರ ಮೂರನೇ ಸ್ಥಾನಕ್ಕೆ ಲಗ್ಗೆ
ಟೂರ್ನಿಯ ಮಹತ್ವದ ಘಟ್ಟದಲ್ಲಿ ತಮ್ಮ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿರುವ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ, ಪ್ರೊ.ಕಬಡ್ಡಿ ಲೀಗ್‍ನಲ್ಲಿ ಮೂರನೇ ಸ್ಥಾನಕ್ಕೇರಿದೆ...

ನವದೆಹಲಿ: ಟೂರ್ನಿಯ ಮಹತ್ವದ ಘಟ್ಟದಲ್ಲಿ ತಮ್ಮ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿರುವ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ, ಪ್ರೊ.ಕಬಡ್ಡಿ ಲೀಗ್‍ನಲ್ಲಿ ಮೂರನೇ ಸ್ಥಾನಕ್ಕೇರಿದೆ.
ಮಂಗಳವಾರ ತ್ಯಾಗರಾಜ ಕ್ರೀಡಾ ಸಂಕೀರ್ಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ 31-18 ಅಂಕಗಳ ಅಂತರದಲ್ಲಿ ಪುನೇರಿ ಪಲ್ಟಾನ್ಸ್ ವಿರುದ್ಧ ಜಯಿಸಿತು. ಪಂದ್ಯದಲ್ಲಿ ಮಂದಗತಿಯ ಆರಂಭ ಪಡೆದ ಜೈಪುರ ತಂಡ, 6ನೇ ನಿಮಿಷದ ವೇಳೆಗೆ 1-3 ಅಂತರದ ಹಿನ್ನಡೆಯಲ್ಲಿತ್ತು. ಹೋರಾಟಕಾರಿ ಪ್ರದರ್ಶನ ತೋರಿದ ಜೈಪುರ ಪಂದ್ಯದ ಮೊದಲಾರ್ಧದಲ್ಲಿ 16-8ರ ಮುನ್ನಡೆ ಸಾಧಿಸಿತ್ತು.
ದ್ವಿತೀಯಾರ್ಧದಲ್ಲೂ ಅದೇ ಪ್ರದರ್ಶನ ಮುಂದುವರಿಸಿ 31-18 ಅಂಕಗಳಿಂದ ಜಯಿಸಿತು. ಟೈಟಾನ್ಸ್‍ಗೆ ಮತ್ತೆ ಟೈ: ಎರಡನೇ ಪಂದ್ಯದಲ್ಲಿ ಆತಿಥೇಯ ದಬಾಂಗ್ ಡೆಲ್ಲಿಹಾಗೂ ತೆಲುಗು ಟೈಟಾನ್ಸ್ ತಂಡ ರೋಚಕ ಹೋರಾಟ ನಡೆಸಿ 45-45 ಅಂಕಗಳ ಅಂತರದ ಟೈ ಫಲಿಂತಾಂಶವನ್ನು ಪಡೆದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


