ಫಿಫಾ ವಿಶ್ವಕಪ್ಗೆ ಗಂಗೂಲಿ ರಾಯಭಾರಿ
ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 17 ವರ್ಷದೊಳಗಿನವರ ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯ ಪ್ರಚಾರ ರಾಯಭಾರಿಯಾಗಿ...

ನವದೆಹಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 17 ವರ್ಷದೊಳಗಿನವರ ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯ ಪ್ರಚಾರ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಆಯ್ಕೆಯಾಗಿದ್ದಾರೆ.
ಈ ಪಂದ್ಯಾವಳಿಯ ಅಧಿಕೃತ ಪ್ರಾಯೋಜಕತ್ವದ ಹಕ್ಕುಗಳನ್ನು ಪಡೆದಿರುವ ಕೋಕಾಕೋಲಾ ಕಂಪನಿಯ ಆಸ್ಥೆಯಂತೆ ಗಂಗೂಲಿಯವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಕೋಕಾ ಕೋಲಾ ಕಂಪನಿಯು ಗಂಗೂಲಿಯವರನ್ನು ತಮ್ಮ ಉತ್ಲಾದನೆಗಳ ಸಾಮಾಜಿಕ ರಾಯಭಾರಿಯನ್ನಾಗಿ ಮುಂದಿನ ಮೂರು ವರ್ಷಗಳ ಕಾಲಾವಧಿವರೆಗೆ ಆಯ್ಕೆ ಮಾಡಿದೆ.
ಅದರಂತೆ, ಸೌರವ್ ಅವರ ಸೇವೆಯನ್ನು ಫಿಫಾ ವಿಶ್ವಕಪ್ಗೂ ಬಳಸಿಕೊಳ್ಳಲಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಫುಟ್ಬಾಲ್ ಕ್ರೀಡೆಯೊಂದಿಗೆ ನಂಟನ್ನೂ ಹೊಂದಿರುವ ಗಂಗೂಲಿ, ಭಾರತದಲ್ಲಿ ನಡೆಯಲಿರುವ ಇಂಡಿಯನ್ ಸೂಪರ್ ಲೀಗ್ (ಐಎಸ್ ಎಲ್)ನ ತಂಡವಾದ ಅಟ್ಲೆಟಿಕೊ ಡಿ ಕೋಲ್ಕತಾ ತಂಡದ ಮಾಲೀಕತ್ವವನ್ನು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


