ಕ್ರೀಡೆ

ಬೆಳ್ಳಿಗೆ ತೃಪ್ತಿಪಟ್ಟ ಭಾರತ

ಆರ್ಚರಿ ವಿಶ್ವಕಪ್ ಚಾಂಪಿಯನ್‍ಶಿಪ್ ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಸಿಗುವ ನಿರೀಕ್ಷೆ ಹುಸಿ...

ಬೆಳ್ಳಿಗೆ ತೃಪ್ತಿಪಟ್ಟ ಭಾರತ
ದೀಪಿಕಾ ಕುಮಾರಿ
Published On :

ವ್ರೊಕ್ಲಾವ್ (ಪೋಲೆಂಡ್): ಆರ್ಚರಿ ವಿಶ್ವಕಪ್ ಚಾಂಪಿಯನ್‍ಶಿಪ್ ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಸಿಗುವ ನಿರೀಕ್ಷೆ ಹುಸಿಯಾಗಿದೆ.

ಭಾನುವಾರ ನಡೆದ ತಂಡಗಳ ವಿಭಾಗದಲ್ಲಿ ಮಿಶ್ರ ರಿಕರ್ವ್ ಸ್ಪರ್ಧೆಯ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ದೀಪಿಕಾ ಕುಮಾರಿ ಹಾಗೂ ಮಂಗಳ್ ಸಿಂಗ್ ಅವರುಳ್ಳ ಭಾರತೀಯ ತಂಡ, ಮೆಕ್ಸಿಕೋದ ಐಡಾ ರೋಮನ್ ಹಾಗೂ ಜುವಾನ್ ರೆನೆ ಸೆರ್ರಾನೊ ಜೋಡಿ ವಿರುದ್ಧ 1-5 ಅಂಕಗಳ ಅಂತರದಲ್ಲಿ ಸೋಲು ಕಂಡಿತು.
ಶನಿವಾರ ನಡೆದಿದ್ದ ಪುರುಷರ ಕಾಂಪೌಂಡ್ ವೈಯಕ್ತಿಕ ವಿಭಾಗದ ಪದಕ ಸುತ್ತಿನಲ್ಲಿ ಭಾರತದ ಅಭಿಷೇಕ್ ವರ್ಮಾ ಚಿನ್ನದ ಪದಕ ಗೆದ್ದಿದ್ದರು. ಹಾಗಾಗಿ, ಭಾನುವಾರ ನಡೆಯಲಿದ್ದ ಮಿಶ್ರ ರಿಕವ್ರ್ನ ಅಂತಿಮ ಸುತ್ತಿನ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಾಗಿದ್ದವು. ಆದರೆ, ಈ ನಿರೀಕ್ಷೆ ಹುಸಿಯಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.