ಕ್ರೀಡೆ

ಸ್ಪಾಟ್ ಫಿಕ್ಸಿಂಗ್‌ನಲ್ಲಿ ಕಿಂಗ್ಸ್ ಇಲೆವೆನ್: ವರದಿ ತಳ್ಳಿಹಾಕಿದ ಪ್ರೀತಿ ಝಿಂಟಾ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕರಾಗಿರುವ ಪ್ರೀತಿ ಝಿಂಟಾ, ತಮ್ಮ ತಂಡದ ಕೆಲವು ಆಟಗಾರರು ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾರುವ ಶಂಕೆ...

ಸ್ಪಾಟ್ ಫಿಕ್ಸಿಂಗ್‌ನಲ್ಲಿ ಕಿಂಗ್ಸ್ ಇಲೆವೆನ್: ವರದಿ ತಳ್ಳಿಹಾಕಿದ ಪ್ರೀತಿ ಝಿಂಟಾ
ಪ್ರೀತಿ ಝಿಂಟಾ
Published On :

ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕರಾಗಿರುವ ಪ್ರೀತಿ ಝಿಂಟಾ, ತಮ್ಮ ತಂಡದ ಕೆಲವು ಆಟಗಾರರು ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾರುವ ಶಂಕೆ ವ್ಯಕ್ತಪಡಿಸಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಬಾಲಿವುಡ್ ನಟಿ ಬುಧವಾರ ತಳ್ಳಿಹಾಕಿದ್ದಾರೆ.

ಬಾಲಿವುಡ್ ನಟಿ ಪ್ರೀತಿ ಝಿಂಟಾ ಅವರು, ತಮ್ಮ ಆಟಗಾರರು ಕೆಲವೊಂದು ಪಂದ್ಯಗಳನ್ನು ಸೋಲುವ ಮೂಲಕ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವ ಶಂಕೆ ಇದೆ ಎಂದು ಬಿಸಿಸಿಐ ಅಧಿಕಾರಿಗಳಲ್ಲಿ ಹೇಳಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಮಾಧ್ಯಮಗಳ ಈ ವರದಿ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಝಿಂಟಾ, ಬಿಸಿಸಿಐ ಅಧಿಕಾರಿಗಳೊಂದಿಗಿನ ತಮ್ಮ ಮಾತುಕತೆಯನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿದ್ದು, ಇದನ್ನು ತಾವು ಖಂಡಿಸುವುದಾಗಿ ಹೇಳಿದ್ದಾರೆ.

'ಈ ವರದಿಯಿಂದ ಆಘಾತವಾಗಿದೆ ಮತ್ತು ಇದು ಸಂಪೂರ್ಣ ಬೇಜವಾಬ್ದಾರಿತನದ್ದು, ಈ ವರದಿ ಸಂಪೂರ್ಣ ಸುಳ್ಳು. ಪರೀಶಿಲಿಸದೇ ತಪ್ಪು ಮಾಹಿತಿ ಕೊಡುವುದನ್ನು ನಿಲ್ಲಿಸಿ' ಎಂದು ಝಿಂಟಾ ಟ್ವೀಟ್ ಮಾಡಿದ್ದಾರೆ.

ಆಗಸ್ಟ್‌ 8ರಂದು ನಡೆದಿದ್ದ ಐಪಿಎಲ್‌ ಕಾರ್ಯಕಾರಿ ಸಮೂಹ ಸಭೆಯಲ್ಲಿ ಪ್ರೀತಿ ಝಿಂಟಾ ಅವರು ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಸದಸ್ಯರಿಗೆ, ತಮ್ಮ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಕೆಲವು ಸದಸ್ಯರು ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ ಮತ್ತು ಬಿಸಿಸಿಐ ನ ಭ್ರಷ್ಟಾಚಾರ ನಿಯಂತ್ರಣ ತಂಡ, ಸ್ಪಾಟ್‌ ಫಿಕ್ಸಿಂಗ್‌ ಹಗರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ವಿಫಲವಾದೆ ಎಂದು ದೂರಿರುವುದಾಗಿ ವರದಿ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.