ಪ್ರೊ ಕಬಡ್ಡಿ: ಫೈನಲ್ ಗೆ ಬೆಂಗಳೂರು ಬುಲ್ಸ್ ಲಗ್ಗೆ
ಅತೀವ ರೋಚಕ ಹಾಗೂ ಉದ್ವೇಗದಿಂದ ಕೂಡಿದ್ದ ಪಂದ್ಯದಲ್ಲಿ ಬಲಿಷ್ಠ ತೆಲುಗು ಟೈಟಾನ್ಸ್ ಮೇಲೆ ಎರಗಿದ ಬೆಂಗಳೂರು ಬುಲ್ಸ್ ತಂಡ ಪ್ರಸಕ್ತ ಕಬಡ್ಡಿ ಟೂರ್ನಿಯ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ....

ಮುಂಬೈ: ಅತೀವ ರೋಚಕ ಹಾಗೂ ಉದ್ವೇಗದಿಂದ ಕೂಡಿದ್ದ ಪಂದ್ಯದಲ್ಲಿ ಬಲಿಷ್ಠ ತೆಲುಗು ಟೈಟಾನ್ಸ್ ಮೇಲೆ ಎರಗಿದ ಬೆಂಗಳೂರು ಬುಲ್ಸ್ ತಂಡ ಪ್ರಸಕ್ತ ಕಬಡ್ಡಿ ಟೂರ್ನಿಯ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ.
ಶುಕ್ರವಾರ ಇಲ್ಲಿನ ಎಸ್ವಿಪಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ 39-38 ಅಂಕಗಳ ಅಂತರದಲ್ಲಿ ತೆಲುಗು ಟೈಟಾನ್ಸ್ ತಂಡವನ್ನು ಮಣಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತು. ಜಿದ್ದಾಜಿದ್ದಿನ ಹೋರಾಟ ನಡೆಸಿದ ಈರ್ವರ ಪೈಕಿ ಟೈಟಾನ್ಸ್ ಗೆ ಕೇವಲ ಒಂದಂಕದಿಂದ ತಿವಿದ ಬುಲ್ಸ್ ನೆರೆದಿದ್ದ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ಗಳಿಸಿತು.
ಫೈನಲ್ ನಲ್ಲಿ ಬುಲ್ಸ್-ಮುಂಬಾ ಸೆಣಸು
ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಯು ಮುಂಬಾ ತಂಡ ಪಾಟ್ನಾ ಪೈರೆಟ್ಸ್ ವಿರುದ್ಧ 35-18 ಅಂಕಗಳಿಂದ ಜಯಿಸಿತು. ಈ ಮೂಲಕ ಸತತ ಎರಡನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತು. ಭಾನುವಾರ ನಡೆಯಲಿರುವ ಪ್ರಶಸ್ತಿ ಸುತ್ತಿನಲ್ಲಿ ಬುಲ್ಸ್ ಹಾಗೂ ಯು ಮುಂಬಾ ತಂಡಗಳು ಸೆಣಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


