ಕ್ರೀಡೆ

ಕ್ವಾರ್ಟರ್ ಗೆ ರೋಜರ್ ಫೆಡರರ್, ಹೊರಬಿದ್ದ ನಡಾಲ್

ಹಾಲಿ ಚಾಂಪಿಯನ್ ರೋಜರ್ ಫೆಡರರ್ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದು, ವೆಸ್ಟರ್ನ್ ಮತ್ತು ಸದರನ್ ಓಪನ್ ಟೆನಿಸ್ ಟೂರ್ನಿಯ ಕ್ವಾರ್ಟರ್ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ...

ಕ್ವಾರ್ಟರ್ ಗೆ ರೋಜರ್ ಫೆಡರರ್, ಹೊರಬಿದ್ದ ನಡಾಲ್
ಹಾಲಿ ಚಾಂಪಿಯನ್ ರೋಜರ್ ಫೆಡರರ್
Published On :

ಸಿನ್ಸಿನಾಟಿ: ಹಾಲಿ ಚಾಂಪಿಯನ್ ರೋಜರ್ ಫೆಡರರ್ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದು, ವೆಸ್ಟರ್ನ್ ಮತ್ತು ಸದರನ್ ಓಪನ್ ಟೆನಿಸ್ ಟೂರ್ನಿಯ ಕ್ವಾರ್ಟರ್ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ.

ಗುರುವಾರ ನಡೆದ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಎರಡನೇ ಶ್ರೇಯಾಂಕಿತ ರೋಜರ್ ಫೆಡರರ್ ತಮ್ಮ ಪ್ರತಿಸ್ಪರ್ಧಿ ದ.ಆಫ್ರಿಕಾದ ಕೆವಿನ್ ಆ್ಯಂಡರ್ಸನ್ ವಿರುದ್ಧ 6-1, 6-1 ನೇರ ಸೆಟ್ ಗಳ ಸುಲಭ ಗೆಲವು ದಾಖಲಿಸಿದರು. ಇನ್ನು ಆಗ್ರ ಶ್ರೇಯಾಂಕಿತ ರಾಫೆಲ್ ನಡಾಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಇದೇ ವೇಳೆ ನಂಬರ್ ಒನ್ ಆಟಗಾರ ನೊವಾಕ್ ಜೊಕೊವಿಚ್, ಆ್ಯಂಡಿಮರ್ರೆ ಮತ್ತು ಸ್ಟಾನಿಸ್ಲಾಸ್ ವಾವ್ರಿಂಕಾ ಸಹ ಮುಂದಿನ ಸುತ್ತಿಗೆ ಪ್ರವೇಶಿದ್ದಾರೆ. ಲೋಪೆಜ್ ತಮ್ಮ ಪಂದ್ಯದಲ್ಲಿ ಮಾಜಿ ಚಾಂಪಿಯನ್ ರಾಫೆಲ್ ನಡಾಲ್ ರನ್ನು 5-7, 6-4, 7-6 (3) ಸೆಟ್ ಗಳ ಅಂತರದಲ್ಲಿ ಮಣಿಸಿದರು.

ಬೋಪಣ್ಣ ಜೋಡಿಗೆ ಜಯ; ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಹಾಗೂ ರೊಮೇನಿಯಾದ ಫ್ಲೋರಿನ ಮರ್ಜಿಯಾ ಜೋಡಿ ಫ್ರೆಂಚ್ ನ ಪಾರೆ ಹ್ಯೂಸ್ ಹರ್ಬಟ್ ಮತ್ತು ನಿಕೋಲಸ್ ಮಹುತ್ ಜೋಡಿ ವಿರುದ್ಧ 1-6, 7-6 (5), 13-11 ಸೆಟ್ ಗಳ ಅಂತರದಲ್ಲಿ ಗೆಲುವು ದಾಖಲಿಸಿ ಟೂರ್ನಿಯ ಅಂತಿಮ ಎಂಟರ ಘಟ್ಟ ತಲುಪಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.