ಕಿವೀಸ್‍ಗೆ ಜಯ
ಆರಂಭಿಕ ಮಾರ್ಟಿನ್ ಗುಪ್ಟಿಲ್ (103) ಅವರ ಅಜೇ ಯ ಶತಕದ ನೆರವಿನಿಂದ ಪ್ರವಾಸಿ ನ್ಯೂಜಿಲೆಂಡ್ ತಂಡ ದಕ್ಷಿಣ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಜಯ ಸಾಧಿಸಿದೆ.

ಪೊಚೆಸ್ಟ್ರೋಮ್: ಆರಂಭಿಕ ಮಾರ್ಟಿನ್ ಗುಪ್ಟಿಲ್ (103) ಅವರ ಅಜೇ ಯ ಶತಕದ ನೆರವಿನಿಂದ ಪ್ರವಾಸಿ ನ್ಯೂಜಿಲೆಂಡ್ ತಂಡ ದಕ್ಷಿಣ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಜಯ ಸಾಧಿಸಿದೆ.
ಭಾನುವಾರ ಸೆನ್ವೆಸ್ ಪಾರ್ಕ್‍ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 8 ವಿಕೆಟ್‍ಗಳ ಅಂತರದಲ್ಲಿ ಹರಿಣಗಳನ್ನು ಸೋಲಿಸಿತು. ಈ ಮೂಲಕ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಉಭಯರು 1-1 ಸಮಬಲ ಸಾಧಿಸಿದಂತಾಗಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿ, ಬೆಹರ್ದಿನ್ ಅವರ ಅರ್ಧಶತಕದ ಸಹಾಯದಿಂದ 49.3 ಓವರ್ ಗಳಲ್ಲಿ 204 ರನ್ ಗಳಿಗೆ ಆಲ್ ಔಟ್ ಆಯಿತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ 44.3 ಓವರ್ ಗಳಲ್ಲಿ 2 ವಿಕೆಟ್ ಗೆ 207 ರನ್ ಸಂಪಾದಿ ಗೆಲುವು ಕಂಡಿತು.
ಸಂಕ್ಷಿಪ್ತ ಸ್ಕೋರ್: ದಕ್ಷಿಣ ಆಫ್ರಿಕಾ 49.3 ಓವರ್ ಗಳಲ್ಲಿ 204 (ಬೆಹರ್ಡಿನ್ 70, ರೊಸ್ಸೊ 39, ಬ್ರಾಸ್ ವೆಲ್ 31ಕ್ಕೆ3); ನ್ಯೂಜಿಲೆಂಡ್ 44.3 ಓವರ್‍ಗಳಲ್ಲಿ 207 (ಗುಪ್ಟಿಲ್ ಅಜೇಯ 103, ಲಾಥಮ್ 64, ಫಂಗಿಸೊ 37ಕ್ಕೆ1)
ಪಂದ್ಯಶ್ರೇಷ್ಠ: ಮಾರ್ಟಿನ್ ಗುಪ್ಟಿಲ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


