ಸಿನ್ಸಿನಾಟಿ ಓಪನ್: ಸಾನಿಯಾ ಜೋಡಿ ಹೋರಾಟ ಅಂತ್ಯ
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಸ್ವಿಜರ್ಲೆಂಡ್ ಜತೆಗಾರ್ತಿ ಮಾರ್ಟಿನಾ ಹಿಂಗಿಸ್ ಸಿನ್ಸಿನಾಟಿ ಓಪನ್ ಟೆನಿಸ್ ಟೂರ್ನಿಯಲ್ಲಿ ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ...

ಸಿನ್ಸಿನಾಟಿ: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಸ್ವಿಜರ್ಲೆಂಡ್ ಜತೆಗಾರ್ತಿ ಮಾರ್ಟಿನಾ ಹಿಂಗಿಸ್ ಸಿನ್ಸಿನಾಟಿ ಓಪನ್ ಟೆನಿಸ್ ಟೂರ್ನಿಯಲ್ಲಿ ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ.
ಭಾನುವಾರ ನಡೆದ ಮಹಿಳೆಯರ ಡಬಲ್ಸ್ ವಿಭಾಗದ ಉಪಾಂತ್ಯದ ಪಂದ್ಯದಲ್ಲಿ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗೀಸ್ ಜೋಡಿಯು ತಮ್ಮ ಪ್ರತಿಸ್ಪರ್ಧಿ ಚೈನೀಸ್ ಥೈಪೇನ ಸಹೋರದರಿಯರಾದ ಹಾ ಚಿಂಗ್ ಚಾನ್ ಮತ್ತು ಯಂಗ್ ಜನ್ ಚಾನ್ ವಿರುದ್ಧ 46, 60, 610 ಸೆಟ್‍ಗಳ ಅಂತರದಲ್ಲಿ ಪರಾಭವಗೊಂಡಿತು. ಒಂದು ಗಂಟೆ 14 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸಾನಿಯಾ ಜೋಡಿ ನಿರೀಕ್ಷಿತ ಮಟ್ಟದ ಆರಂಭ ಪಡೆಯಲಿಲ್ಲ.
ಆರಂಭಿಕ ಸೆಟ್‍ನಲ್ಲಿ ಥೈಪೇ ಸಹೋದರಿಯರ ವಿರುದ್ಧ 46 ರ ಹಿನ್ನಡೆ ಅನುಭವಿಸಿತ್ತು. ನಂತರ ಎರಡನೇ ಸೆಟ್‍ನಲ್ಲಿ ಮತ್ತೆ ತಮ್ಮ ಅಬ್ಬರದ ಆಟ ಪ್ರದರ್ಶಿಸಿದ ಇಂಡೊ ಸ್ವಿಸ್ ಜೋಡಿ ಎದುರಾಳಿ ಜೋಡಿಗೆ ಅವಕಾಶ ನೀಡದೇ ಸೆಟ್ ಅನ್ನು 60ಯಿಂದ ಕ್ಲೀನ್‍ಸ್ವೀಪ್ ಮಾಡಿಕೊಂಡಿತ್ತು. ಎರಡು ಸೆಟ್‍ಗಳ ನಂತರ ಉಭಯ ಜೋಡಿಗಳು ಸಮಬಲ ಸಾಧಿಸಿದ್ದರಿಂದ ಮೂರನೇ ಸೆಟ್ ಸಾಕಷ್ಟು ರೋಚಕವಾಗಿತ್ತು.
ಆದರೆ ಮತ್ತೆ ಸಾನಿಯಾ ಹಾಗೂ ಹಿಂಗಿಸ್ ವಿರುದ್ಧ ಬಿಗಿ ಹಿಡಿತ ಸಾಧಿಸಿದ ಥೈಪೇ ಸಹೋದರಿಯರು ಪಂದ್ಯವನ್ನು ಗೆದ್ದುಕೊಂಡರು. ಈ ಮೂಲಕ ಸಾನಿಯಾ ಜೋಡಿ ಈ ಟೂರ್ನಿಯಲ್ಲಿ ತಮ್ಮ ಹೋರಾಟ ಅಂತ್ಯಗೊಳಿಸಿದರು. ಈ ಟೂರ್ನಿ ಇದೇ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ ಯು.ಎಸ್ ಓಪನ್ ಗ್ರಾಂಡ್ ಸ್ಲಾಮ್ ಟೆನಿಸ್ ಟೂರ್ನಿಗೆ ವೇದಿಕೆಯಾಗಿ ಬಿಂಬಿತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


