ಕ್ರೀಡೆ

ಸದ್ಯಕ್ಕೆ ಇಂಡೊ-ಪಾಕ್ ಕ್ರಿಕೆಟ್ ಬೇಡ

ಭಾರತ ಮತ್ತು ಪಾಕಿಸ್ತಾನ ಡುವಣ ಗಡಿ ಸಮಸ್ಯೆ ಬಗೆಹರಿಯುವವರೆಗೂ ಭಾರತ ಮತ್ತು ಪಾಕಿಸ್ತಾನ ನಡುವಣ ಕ್ರಿಕೆಟ್ ಸರಣಿಯನ್ನು...

ಸದ್ಯಕ್ಕೆ ಇಂಡೊ-ಪಾಕ್ ಕ್ರಿಕೆಟ್ ಬೇಡ
ಶೋಯಬ್ ಅಕ್ತರ್
Published On :

ದುಬೈ: ಭಾರತ ಮತ್ತು ಪಾಕಿಸ್ತಾನ ಡುವಣ ಗಡಿ ಸಮಸ್ಯೆ ಬಗೆಹರಿಯುವವರೆಗೂ ಭಾರತ ಮತ್ತು ಪಾಕಿಸ್ತಾನ ನಡುವಣ ಕ್ರಿಕೆಟ್ ಸರಣಿಯನ್ನು ಮುಂದೂಡಬೇಕು ಎಂದು ಪಾಕ್‍ನ ಮಾಜಿ ವೇಗಿ ಶೋಯಬ್ ಅಕ್ತರ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವರ್ಷಾಂತ್ಯದಲ್ಲಿ ಯುಎಇಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ 3 ಟೆಸ್ಟ್, 5 ಏಕದಿನ ಮತ್ತು 2 ಟಿ20 ಪಂದ್ಯಗಳ ಸರಣಿಯಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ಎರಡು ದೇಶಗಳ ನಡುವಣ ಗಡಿ ಸಮಸ್ಯೆ ಹಾಗೂ ಉಗ್ರರ ದಾಳಿಯ ಕಾರಣದಿಂದ ಭಾರತ, ಪಾಕಿಸ್ತಾನ ವಿರುದ್ಧದ ಕ್ರಿಕೆಟ್ ಸರಣಿಯಾಡಲು ನಿರಾಕರಿಸುತ್ತಿದೆ.

ಕ್ರೀಡೆಯನ್ನು ರಾಜಕೀಯದಿಂದ ದೂರವಿಡಬೇಕೆಂದು ಪ್ರತಿಯೊಬ್ಬರೂ ಅರಿತಿದ್ದಾರೆ. ಆದರೆ, ಪ್ರಸಕ್ತ ಎರಡು ದೇಶಗಳ ನಡುವಣ ಗಡಿ ಸಮಸ್ಯೆಯ ನಡುವೆ ಈ ಸರಣಿ ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.