ಆಂಗ್ಲರಿಗೆ ಟಿ20 ಜಯ
ನಾಯಕ ಇಯಾನ್ ಮೊರ್ಗನ್ (74) ಹಾಗೂ ಮೊಯೀನ್ ಅಲಿ (72) ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿದೆ...

ಕಾರ್ಡಿಫ್: ನಾಯಕ ಇಯಾನ್ ಮೊರ್ಗನ್ (74) ಹಾಗೂ ಮೊಯೀನ್ ಅಲಿ (72) ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿದೆ.
ಸೋಮವಾರ ನಡೆದ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 5 ರನ್‍ಗಳ ಅಂತರದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿತು. ಈ ಮೂಲಕ ಆಶಸ್ ಟೆಸ್ಟ್ ಸರಣಿಯನ್ನು ಗೆದ್ದಿದ್ದ ಇಂಗ್ಲೆಂಡ್ ತಂಡ ಈಗ ಏಕೈಕ ಟಿ20 ಪಂದ್ಯವನ್ನು ಗೆದ್ದುಕೊಂಡಿದೆ. ಆ ಮೂಲಕ ಪ್ರಸಕ್ತ ಇಂಗ್ಲೆಂಡ್ ಪ್ರವಾಸದಲ್ಲಿ ಆಸ್ಟ್ರೇಲಿಯಾ ನಿರಾಸೆ ಹಾದಿ ಮುಂದುವರಿದಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್‍ಗಳಲ್ಲಿ 5 ವಿಕೆಟ್‍ಗೆ 182 ರನ್ ದಾಖಲಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 8 ವಿಕೆಟ್‍ಗೆ 177 ರನ್ ದಾಖಲಿಸಲಷ್ಟೇ ಶಕ್ತರಾದರು. ಆಸ್ಟ್ರೇಲಿಯಾ ಪರ ಸ್ಟೀವನ್ ಸ್ಮಿತ್ (90) ಹೋರಾಟ ವ್ಯರ್ಥವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


