ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಟೀಂ ಇಂಡಿಯಾ ಕೈವಶ
ಅಥಿತೇಯ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ 117 ರನ್ ಗಳಿಂದ ಜಯ ಗಳಿಸಿದ್ದು, 22 ವರ್ಷಗಳ ಬಳಿಕ ಶ್ರೀಲಂಕಾ ನೆಲದಲ್ಲಿ ಟೀಂ ಇಂಡಿಯಾ...

Published On :
ಕೊಲಂಬೊ: ಅಥಿತೇಯ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ 117 ರನ್ ಗಳಿಂದ ಜಯ ಗಳಿಸಿದ್ದು, 22 ವರ್ಷಗಳ ಬಳಿಕ ಶ್ರೀಲಂಕಾ ನೆಲದಲ್ಲಿ ಟೀಂ ಇಂಡಿಯಾಗೆ ಮೊದಲ ಸರಣಿ ಗೆದ್ದ ಸಂಭ್ರಮ.
ಕೊಲಂಬೋದ ಸಿಂಹಳೀಸ್ ಸ್ಪೋರ್ಟ್ ಕ್ಲಬ್ ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಗಳಿಸುವ ಮೂಲಕ 2-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ.
ಶ್ರೀಲಂಕಾದ ಮ್ಯಾಥ್ಯೂಸ್ ಅವರ ಅಬ್ಬರ ಶತಕ ನಡುವೆಯೂ ಲಂಕಾ ಟೀಂ ಇಂಡಿಯಾಗೆ ಶರಣಾಗಿದೆ. 1993-94ರಲ್ಲಿ ಶ್ರೀಲಂಕಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದಿತ್ತು.
ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 312 ರನ್ ಗಳಿಗೆ ಆಲೌಟ್ ಆಗಿತ್ತು. ಇಶಾಂತ್ ಶರ್ಮಾರ ಮಾರಕ ದಾಳಿಗೆ ಲಂಕಾ ಮೊದಲ ಇನ್ನಿಂಗ್ಸ್ ನಲ್ಲಿ 201 ರನ್ ಗಳಿಗೆ ಆಲೌಟ್ ಆಗಿತ್ತು. 111 ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 274 ರನ್ ಗಳಿಗೆ ಆಲೌಟ್ ಆಗಿತ್ತು. 386 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಲಂಕಾ ತಂಡ 268 ರನ್ ಗಳಿಗೆ ಸರ್ಪಪತನಗೊಳ್ಳುವ ಮೂಲಕ ಸರಣಿ ಟೀಂ ಇಂಡಿಯಾ ಕೈವಶವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


