ಜವಾಬ್ದಾರಿಯುತ ಬ್ಯಾಟಿಂಗ್ ನಿಂದ ಭಾರತಕ್ಕೆ ಮೇಲುಗೈ
ನಾಯಕ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟೆಸ್ಟ್ ...

ನವದೆಹಲಿ: ನಾಯಕ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಬಿಗಿ ಹಿಡಿತ ಸಾಧಿಸಿದೆ.
ಭಾರತ ತಂಡವು ಒಟ್ಟು 403 ರನ್ ಮುನ್ನಡೆ ಸಾಧಿಸಿದ್ದು, ಇನ್ನೂ ಎರಡು ದಿನದ ಆಟ ಬಾಕಿ ಇರುವುದರಿಂದ ಪಂದ್ಯದಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ. ಮೂರನೇ ದಿನ 2ನೇ ಇನ್ನಿಂಗ್ಸ್ ಪ್ರಾರಂಭಿಸಿದ ಭಾರತೀಯ ಆರಂಭಿಕ ಆಟಗಾರರು ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಭಾರತ 57 ರನ್ ಆಗುವಷ್ಟರಲ್ಲಿ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜತೆಯಾದ ವಿರಾಟ್ ಕೊಹ್ಲಿ (83*) ಮತ್ತು ಅಜಿಂಕ್ಯ ರಹಾನೆ (52*) ಹರಿಣಗಳ ಪಡೆಯ ಬೌಲರ್ಗಳಿಗೆ ಹೆಚ್ಚಿನ ಮೇಲುಗೈ ಸಾಧಿಸಲು ಅವಕಾಶ ನಿರಾಕರಿಸಿದರು.
ಬೌಲರ್ಗಳಿಗೆ ನೆರವಾಗುತ್ತಿದ್ದ ಪಿಚ್ನಲ್ಲಿ ಎಚ್ಚರಿಕೆಯಿಂದ ಇನ್ನಿಂಗ್ಸ್ ಕಟ್ಟಿದ ಇಬ್ಬರೂ ಆಟಗಾರರು 5ನೇ ವಿಕೆಟ್ ಜತೆಯಾಟದಲ್ಲಿ 133 ರನ್ ಗಳಿಸಿದ್ದಾರೆ. ಭಾರತ ಮೂರನೇ ದಿನದಂತ್ಯಕ್ಕೆ 81 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 190 ರನ್ ಗಳಿಸಿದೆ. ದಕ್ಷಿಣ ಆಫ್ರಿಕಾ ಪರ ಪ್ರಬಲ ದಾಳಿ ನಡೆಸಿದ ಮಾರ್ಕೆಲ್ 29 ಕ್ಕೆ 3 ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್:
ಭಾರತ ಮೊದಲ ಇನ್ನಿಂಗ್ಸ್ 117.5 ಓವರ್ 334 ಆಲೌಟ್ (ಅಜಿಂಕ್ಯ ರಹಾನೆ 127, ಅಶ್ವಿನ್ 56, ಅಬಾಟ್ 40 ಕ್ಕೆ 5)
ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ 49.3 ಓವರ್ 121 ಆಲೌಟ್ (ಡಿವಿಲಿಯರ್ಸ್ 42, ಜಡೇಜಾ 30 ಕ್ಕೆ 5)
ಭಾರತ ಎರಡನೇ ಇನ್ನಿಂಗ್ಸ್ 81 ಓವರ್ 4 ವಿಕೆಟ್ಗೆ 190 (ವಿರಾಟ್ ಕೊಹ್ಲಿ 83*, ಅಜಿಂಕ್ಯ ರಹಾನೆ 52*, ಮಾರ್ಕೆಲ್ 29 ಕ್ಕೆ 3)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


