4ನೇ ಪಂದ್ಯ: ಟೀಂ ಇಂಡಿಯಾ ವಿರುದ್ಧ ಡ್ರಾಗಾಗಿ ಆಫ್ರಿಕಾ ಹೆಣಗಾಟ
ಭಾರತ ವಿರುದ್ಧದ ಟೆಸ್ಟ್ ಸರಣಿ ಸೋತಿರುವ ದಕ್ಷಿಣ ಆಫ್ರಿಕಾ ನಾಲ್ಕನೇ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಹೆಣಗಾಡುತ್ತಿದೆ...

ನವದೆಹಲಿ: ಭಾರತ ವಿರುದ್ಧದ ಟೆಸ್ಟ್ ಸರಣಿ ಸೋತಿರುವ ದಕ್ಷಿಣ ಆಫ್ರಿಕಾ ನಾಲ್ಕನೇ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಹೆಣಗಾಡುತ್ತಿದೆ.
ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು ಟೀಂ ಇಂಡಿಯಾ 481 ರನ್ ಗಳ ಬೃಹತ್ ಗುರಿ ನೀಡಿದೆ. ಈ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾದ ಆಟಗಾರರು ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಮುಂದಾದಂತಿದೆ. 72 ಓವರ್ ಗಳನ್ನು ಎದುರಿಸಿರುವ ದಕ್ಷಿಣ ಆಫ್ರಿಕಾ ತಂಡ ಕೇವಲ 72 ರನ್ ಗಳಿಸಿ 2 ವಿಕೆಟ್ ಕಳೆದುಕೊಂಡಿದೆ.
ಆಫ್ರಿಕಾ ಆಟಗಾರರು ನಿಧಾನಗತಿಯ ಆಟವನ್ನು ನೆಚ್ಚಿಕೊಂಡಿದ್ದು ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಹೋರಾಟ ನಡೆಸುತ್ತಿರುವಂತೆ ಕಾಣುತ್ತಿದೆ. ಆರಂಭಿಕರಾದ ಎಲ್ಗರ್ 4 ಹಾಗೂ ಭವುಮಾ 34 ರನ್ ಗಳಿಸಿ ಔಟಾದರು. ನಂತರ ಬಂದ ಹಶೀಮ್ ಆರ್ಮಾ ಸುಮಾರು 207 ಎಸೆತಗಳಲ್ಲಿ 23 ರನ್ ಗಳಿಸಿ ಆಡುತ್ತಿದ್ದಾರೆ. ಇನ್ನೊಂದೆಡೆ ಸ್ಫೋಟಕ ಆಟಕ್ಕೆ ಹೆಸರಾಗಿರುವ ಎ ಬಿ ಡಿವಿಲಿಯರ್ಸ್ 91 ಚೆಂಡು ಎದುರಿಸಿ 11 ರನ್ ಗಳಿಸಿ ಸೋಮವಾರಕ್ಕೆ ಆಟ ಕಾಯ್ದುಕೊಂಡಿದ್ದಾರೆ.
ನಾಳೆ ಪಂದ್ಯದ ಕೊನೆಯ ದಿನವಾಗಿದ್ದು ಪಂದ್ಯವನ್ನು ಗೆಲ್ಲಲು ಟೀಂ ಇಂಡಿಯಾ 8 ವಿಕೆಟ್ ಗಳನ್ನು ಪಡೆಯುವ ಅವಶ್ಯಕತೆ ಇದೆ. ಈ ಮಧ್ಯೆ ನಿಧಾನಗತಿಯ ಬ್ಯಾಟಿಂಗ್ ಮಾಡುತ್ತಿದ್ದು, ಪಂದ್ಯ ಕುತೂಹಲ ಕೆರಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


