ಕ್ರೀಡೆ

ಆಸ್ಟ್ರೇಲಿಯಾಗೆ ಚಾಂಪಿಯನ್ ಪಟ್ಟ

ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಪ್ರಬಲ ಬೆಲ್ಜಿಯಂ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಗೆದ್ದು ಮತ್ತೆ ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡಿದೆ...

ಆಸ್ಟ್ರೇಲಿಯಾಗೆ ಚಾಂಪಿಯನ್ ಪಟ್ಟ
ಗೆಲುವಿನ ಸಂಭ್ರಮದಲ್ಲಿ ಆಸ್ಟ್ರೇಲಿಯಾ
Published On :

ರಾಯ್ ಪುರ: ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಪ್ರಬಲ ಬೆಲ್ಜಿಯಂ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಗೆದ್ದು ಮತ್ತೆ ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡಿದೆ.

ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ 2-1 ಗೋಲುಗಳಿಂದ ಬೆಲ್ಜಿಯಂ ಪಡೆಯನ್ನು ಮಣಿಸಿತು. ಆ ಮೂಲಕ ಚಾಂಪಿಯನ್ ಆಯಿತು. ಆಸ್ಟ್ರೇಲಿಯಾ  ಪರ  ಜರ್ಮಿ ಹೆವರ್ಡ್ 16ನೇ, ಮ್ಯಾಥ್ಯೂ ಡೌಸನ್ 21ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಬೆಲ್ಜಿಯಂ ತಂಡದ ಪರ ಸಿಮೊನ್ ಗೌನಾರ್ಡ್ ಪಂದ್ಯದ 60ನೇ ಅಂತಿಮ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ  ಅವಕಾಶದಲ್ಲಿ ಗೋಲು ದಾಖಲಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಈ ಪ್ರಶಸ್ತಿ ಗೆಲ್ಲುವ ಮೂಲಕ ಆಸೀಸ್ ವಿಶ್ವ ಹಾಕಿಯಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.