ಮರಿನ್ ಪಾಲಾದ ವರ್ಷದ ಆಟಗಾರ್ತಿ ಗೌರವ
ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟದ ವರ್ಷದ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಭಾರತದ ಸೈನಾ ನೆಹ್ವಾಲ್ ಗೆ ನಿರಾಸೆಯಾಗಿದೆ. ಕಾರಣ ಆಲ್..

ದುಬೈ: ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟದ ವರ್ಷದ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಭಾರತದ ಸೈನಾ ನೆಹ್ವಾಲ್ ಗೆ ನಿರಾಸೆಯಾಗಿದೆ. ಕಾರಣ ಆಲ್ ಇಂಗ್ಲೆಂಡ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ಶಿಪ್ ವಿಜೇತೆ ಕ್ಯಾರೊಲಿನ್ ಮರಿನ್ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಸೋಮವಾರ ರಾತ್ರಿ ನಡೆದ ಸಮಾರಂಭದಲ್ಲಿ ಮರಿನ್ ಬಿಡಬ್ಲ್ಯೂಎಫ್ ಅಧ್ಯಕ್ಷ ಪೌಲ್ ಎರಿಕ್ ಹೈರ್ ಅವರಿಂದ ಮರಿನ್ ಈ ಪ್ರಶಸ್ತಿಯನ್ನು ಪಡೆದರು. ಐದು ವಿಶ್ವ ಸೂಪರ್ ಸಿರೀಸ್ ಟೂರ್ನಿಗಳನ್ನು ಗೆದ್ದುಕೊಂಡಿರುವ ಕ್ಯಾರೊಲಿನ್ ಮರಿನ್, ಭಾರತದ ಸೈನಾ ನೆಹ್ವಾಲ್ ಜತೆಗೆ ಚೀನಾದ ಝಾವ್ ಯುನ್ಲೆ ಮತ್ತು ಬಾವ್ ಯಿಕ್ಸಿನ್ ಅವರನ್ನು ಸಹ ಹಿಂದಿಕ್ಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
``ಈ ಪ್ರಶಸ್ತಿಯನ್ನು ಚೀನಾದ ಝಾವ್ ಅವರು ಗೆಲ್ಲುವುದಾಗಿ ಭಾವಿಸಿದ್ದೆ. ಕಾರಣ ಈ ವರ್ಷ ಅವರು ಉತ್ತಮ ಸಾಧನೆ ಮಾಡಿದ್ದರು. ಈ ಪ್ರಶಸ್ತಿ ನನಗೆ ಲಭಿಸಿರುವುದು ಸಂತಸ ತಂದಿದೆ. ಇದರಿಂದ ಈ ವರ್ಷ ನಾನು ಏನಾದರೂ ಸಾಧನೆ ಮಾಡಿದ್ದೇನೆ ಎಂಬುದನ್ನು ನೆನಪಿಸುತ್ತದೆ'' ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


