ಧವನ್ ಬೌಲಿಂಗ್‌ಗೆ ಆಕ್ಷೇಪ?
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೊನೆಯ ಟೆಸ್ಟ್ ಪಂದ್ಯದಲ್ಲಿ ಧವನ್ ಬೌಲಿಂಗ್ ಶೈಲಿ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಮ್ಯಾಚ್ ಅಧಿಕಾರಿಗಳು...

Published On :
ನವದೆಹಲಿ: ಟೀಂ ಇಂಡಿಯಾದ ಬೌಲರ್ ಶಿಖರ್ ಧವನ್ ಅವರ ಬೌಲಿಂಗ್ ರೀತಿ ಸರಿಯಲ್ಲ.ಈ ಬಗ್ಗೆ ಆಕ್ಷೇಪವಿದೆ ಎಂಬ ಕೂಗು ಕೇಳಿ ಬಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೊನೆಯ ಟೆಸ್ಟ್ ಪಂದ್ಯದಲ್ಲಿ ಧವನ್ ಬೌಲಿಂಗ್ ಶೈಲಿ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಮ್ಯಾಚ್ ಅಧಿಕಾರಿಗಳು ಐಸಿಸಿಗೆ ವರದಿ ಸಲ್ಲಿಸಿದ್ದಾರೆ.
14 ದಿನಗಳೊಳಗೆ ಧವನ್‌ರನ್ನು ಬೌಲಿಂಗ್ ಪರಿಶೋಧನೆಗೆ ಒಳಪಡಿಸಲಾಗುವುದು. ಇದರ ನಂತರವೇ ಅವರ ಶೈಲಿ ನಿಯಮ ವಿರುದ್ಧವಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ಹೇಳಲಾಗುವುದು.
ಬಲಗೈ ಆಫ್ ಸ್ಪಿನ್ ಬೌಲಿಂಗ್ ಮಾಡುತ್ತಾರೆ ಧವನ್. ನಾಲ್ಕನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್ ನಲ್ಲಿ ಧವನ್ ಬೌಲಿಂಗ್ ಮಾಡಿದ್ದರು. ಮೂರು ಓವರ್‌ಗಳಲ್ಲಿ 1 ಮೇಡನ್ ಸೇರಿದಂತೆ 9 ರನ್‌ಗಳನ್ನು ಧವನ್ ಬಿಟ್ಟು ಕೊಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


