ಅನುಮಾನಾಸ್ಪದ ಬೌಲಿಂಗ್: ಧವನ್ ವಿರುದ್ಧ ದೂರು
ಇತ್ತೀಚೆಗಷ್ಟೇ ಮುಕ್ತಾಯ ಕಂಡ ದಕ್ಷಿಣ ಆಫ್ರಿಕಾ ವಿರುದ್ಧದ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಅರೆಕಾಲಿಕ ಬೌಲರ್ ಆಗಿ ಬೌಲಿಂಗ್ ಮಾಡಿದ ಶಿಖರ್ ಧವನ್ ಅವರ ಶೈಲಿ ಮೇಲೆ ಅನುಮಾನ ವ್ಯಕ್ತವಾಗಿದೆ...

ದುಬೈ: ಇತ್ತೀಚೆಗಷ್ಟೇ ಮುಕ್ತಾಯ ಕಂಡ ದಕ್ಷಿಣ ಆಫ್ರಿಕಾ ವಿರುದ್ಧದ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಅರೆಕಾಲಿಕ ಬೌಲರ್ ಆಗಿ ಬೌಲಿಂಗ್ ಮಾಡಿದ ಶಿಖರ್ ಧವನ್ ಅವರ ಶೈಲಿ ಮೇಲೆ ಅನುಮಾನ ವ್ಯಕ್ತವಾಗಿದೆ.
ಪಂದ್ಯದ ಅಧಿಕಾರಿಗಳು ಧವನ್ ಬೌಲಿಂಗ್ ಶೈಲಿಯು ನಿಯಮ ಬಾಹಿರವಾಗಿದೆ ಎಂದು ಐಸಿಸಿಗೆ ವರದಿ ಸಲ್ಲಿಸಿದ್ದಾರೆ. ಅಲ್ಲದೆ ಈ ಕುರಿತು ಟೀಂ ಇಂಡಿಯಾ ಆಡಳಿತ ಮಂಡಳಿಗೂ ಮಾಹಿತಿ ನೀಡಲಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಧವನ್ ಬೌಲಿಂಗ್ ಶೈಲಿ ನಿಗಾ ವಹಿಸಲಾಗಿದ್ದು, ಐಸಿಸಿ ನಿಯಮದಂತೆ ಪರಿಶೀಲಿಸಲಾಗುವುದು. 14 ದಿನಗಳ ಒಳಗಾಗಿ ಅವರು ಪರೀಕ್ಷೆಗೆ ಒಳಗಾಗಬೇಕಿದೆ. ನಂತರ ಫಲಿಂತಾಂಶ ಬರುವವರೆಗೂ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಬೌಲಿಂಗ್ ಮುಂದುವರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


