ಕ್ರೀಡೆ

ನಾಕೌಟ್‍ಗೆ ರಾಬಿನ್ ಅಲಭ್ಯ

ಮಂಡಿ ನೋವಿನಿಂದ ಬಳಲುತ್ತಿರುವ ಭಾರತ ಫುಟ್ಬಾಲ್ ತಂಡದ ಪ್ರಮುಖ ಸ್ಟ್ರೈಕರ್ ರಾಬಿನ್ ಸಿಂಗ್ ಅವರು ಸ್ಯಾಫ್...

ನಾಕೌಟ್‍ಗೆ ರಾಬಿನ್ ಅಲಭ್ಯ
ರಾಬಿನ್ ಸಿಂಗ್
Published On :
ತಿರುವನಂತಪುರ: ಮಂಡಿ ನೋವಿನಿಂದ ಬಳಲುತ್ತಿರುವ ಭಾರತ ಫುಟ್ಬಾಲ್ ತಂಡದ ಪ್ರಮುಖ ಸ್ಟ್ರೈಕರ್ ರಾಬಿನ್ ಸಿಂಗ್ ಅವರು ಸ್ಯಾಫ್  ಫುಟ್ಬಾಲ್ ಟೂರ್ನಿಯ ಇನ್ನುಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. 
ಶ್ರೀಲಂಕಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ರಾಬಿನ್ ಸಿಂಗ್ ಆಕರ್ಷಕ ಎರಡು ಗೋಲು ದಾಖಲಿಸುವ ಮೂಲಕ ಗಮನ ಸೆಳೆದಿದ್ದರು. ಅದೇ ಪಂದ್ಯದಲ್ಲಿ ಮಂಡಿ ನೋವಿನ ಸಮಸ್ಯೆಗೆ ಸಿಲುಕಿದ್ದರು. ಎಂಆರ್‍ಐಐ ಸ್ಕ್ಯಾನಿಂಗ್ ನಲ್ಲಿ ರಾಬಿನ್ ಅವರು ತಗಲಿರುವ ಗಾಯದ ತೀವ್ರತೆ ದೊಡ್ಡದಾಗಿದೆ. 
``ನಾವು ನಿರೀಕ್ಷಿಸಿದ್ದಕ್ಕಿಂತ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ಗಾಯವಾಗಿದೆ. ಹಾಗಾಗಿ ವೈದ್ಯರು 10 ದಿನಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಹಾಗಾಗಿ ಅವರು ನಾಕೌಟ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ'' ಎಂದು ಭಾರತ ತಂಡದ ಕೋಚ್ ಸ್ಟಾಫನ್ ಕಾನ್ಸ್‍ಟಾಂಟೀನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.